ಟೋಕಿಯೊ: ಭಾರತ ದಿನದ ಆರಂಭದಲ್ಲೇ ಎರಡು ಪದಕ ಬಾಚಿಕೊಂಡಿದೆ. P4 ಮಿಶ್ರ 50 ಮೀಟರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯಲ್ಲಿ ಮನೀಶ್ ನರ್ವಾಲ್ ಚಿನ್ನಕ್ಕೆ ಮತ್ತು ಸಿಂಗ್ ರಾಜ್ ಬೆಳ್ಳಿಗೆ ಮುತ್ತಿಕ್ಕಿದ್ದಾರೆ.
ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತೀಯ ಕ್ರೀಡಾಪಟುಗಳು ಅದ್ಭುತ ಪ್ರದರ್ಶನ ಮುಂದುವರಿಸುತ್ತಿದ್ದಾರೆ.
ಇಂದು ಭಾರತ ದಿನದ ಆರಂಭದಲ್ಲೇ ಎರಡು ಪದಕ ಬಾಚಿಕೊಂಡಿದ್ದು, P4 ಮಿಶ್ರ 50 ಮೀಟರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯಲ್ಲಿ ಮನೀಶ್ ನರ್ವಾಲ್ ಚಿನ್ನಕ್ಕೆ ಮತ್ತು ಸಿಂಗ್ರಾಜ್ ಬೆಳ್ಳಿಗೆ ಮುತ್ತಿಕ್ಕಿದ್ದಾರೆ.
ಇದಕ್ಕೂ ಮುನ್ನ ನಡೆದ ಸೆಮಿ ಫೈನಲ್ ನಲ್ಲಿ ಶೂಟಿಂಗ್ ಪಿ4 50 ಮೀಟರ್ ಪಿಸ್ತೂಲ್ ಎಸ್ ಹೆಚ್ 1 ವಿಭಾಗದಲ್ಲಿ ಮನೀಶ್ 533-7x ಮತ್ತು ಸಿಂಗರಾಜ್ 536-4x ಅಂಕಗಳೊಂದಿಗೆ ಫೈನಲ್ ಪ್ರವೇಶಿಸಿದ್ದರು. ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಬಾಚಿದ ಪದಕಗಳ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 3 ಚಿನ್ನ, 7 ಬೆಳ್ಳಿ ಮತ್ತು 5 ಕಂಚಿನ ಪದಕಗಳಾಗಿವೆ.
ಬ್ಯಾಡ್ಮಿಂಟನ್ ಪುರುಷರ ಎಸ್‌ಎಲ್3 ವಿಭಾಗದಲ್ಲಿ ವಿಶ್ವ ನಂ.1 ಆಟಗಾರರೂ ಆದ ಭಾರತದ ಪ್ರಮೋದ್ ಭಗತ್ ಫೈನಲ್ ಗೆ ಲಗ್ಗೆಯಿಟ್ಟಿದ್ದಾರೆ. ಪುರುಷರ ಸಿಂಗಲ್ಸ್ ಎಸ್ ಎಲ್ 3 ಸೆಮಿ ಫೈನಲ್ ನಲ್ಲಿ ಪ್ರಮೋದ ಭಗತ್ ಜಪಾನ್ ನ ಡೈಸುಕೆ ಫುಜಿಹಾರ ಅವರನ್ನು 21-11, 21-16 ರಿಂದ ಸೋಲಿಸಿದ್ದರು. ಫೈನಲ್ ಗೆ ಹೆಜ್ಜೆ ಇಟ್ಟಿರುವ ಭಗತ್ ದೇಶಕ್ಕೆ ಬೆಳ್ಳಿ ಪದಕದ ಭರವಸೆ ಮೂಡಿಸಿದ್ದಾರೆ.