ಪ್ಯಾರಾಲಿಂಪಿಕ್ಸ್: ಭಾರತಕ್ಕೆ ಎರಡನೇ ಚಿನ್ನದ ಪದಕ ಗೆದ್ದು ಕೊಟ್ಟ ನಿತೇಶ್ ಕುಮಾರ್

Prasthutha|

ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಇಂದು ಎರಡನೇ ಚಿನ್ನದ ಪದಕ ಲಭಿಸಿದೆ.

- Advertisement -

ಕ್ರೀಡಾಕೂಟದ ಆರನೇ ದಿನ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಎಸ್​ಎಲ್3 ವಿಭಾಗದಲ್ಲಿ ಭಾರತದ ನಿತೇಶ್ ಕುಮಾರ್ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡರು.

ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ನಿತೇಶ್ 21-14, 18-21, 23-21 ರಿಂದ ಗೆಲುವು ಸಾಧಿಸಿ ಚಿನ್ನಕ್ಕೆ ಮುತ್ತಿಟ್ಟರು. ಇದರೊಂದಿಗೆ ಭಾರತ ಈ ಬಾರಿಯ ಪ್ಯಾರಾಲಿಂಪಿಕ್ಸ್‌ನಲ್ಲಿ ಇದುವರೆಗೆ ಒಟ್ಟು 9 ಪದಕಗಳನ್ನು ತನ್ನದಾಗಿಸಿಕೊಂಡಂತ್ತಾಗಿದೆ.



Join Whatsapp
Exit mobile version