ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತ ತನ್ನ ಎಂಟನೇ ಬೆಳ್ಳಿ ಪದಕವನ್ನು ಪಡೆದುಕೊಂಡಿದೆ.
ಕ್ರೀಡಾಕೂಟದ ಏಳನೇ ದಿನ ಪುರುಷರ ಶಾಟ್ ಪುಟ್ ಎಫ್46 ವಿಭಾಗದಲ್ಲಿ ಭಾರತದ ಸಚಿನ್ ಸರ್ಜೆರಾವ್ ಖಿಲಾರಿ ತನ್ನ ಎರಡನೇ ಪ್ರಯತ್ನದಲ್ಲಿ 16.32 ಮೀಟರ್ ದೂರ ಶಾಟ್ ಪುಟ್ ಎಸೆದು ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡರು.
ಇದರೊಂದಿಗೆ ಭಾರತ ಈ ಬಾರಿಯ ಪ್ಯಾರಾಲಿಂಪಿಕ್ಸ್ ನಲ್ಲಿ ಇದುವರೆಗೆ ಒಟ್ಟು 21 ಪದಕಗಳನ್ನು ತನ್ನದಾಗಿಸಿಕೊಂಡಿದೆ.