ಮಂಗಳೂರು: ಅರೆ ವೈದ್ಯಕೀಯ ವಿದ್ಯಾರ್ಥಿ ಮಲಗಿದ್ದಲ್ಲೇ ಮೃತ್ಯು

Prasthutha|

ಉಳ್ಳಾಲ: ಅರೆ ವೈದ್ಯಕೀಯ ತರಬೇತಿ ವಿದ್ಯಾರ್ಥಿಯೋರ್ವ ಮಲಗಿದ್ದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ರಾತ್ರಿ ದೇರಳಕಟ್ಟೆಯಲ್ಲಿ ನಡೆದಿದೆ.

- Advertisement -

ಉಪ್ಪಿನಂಗಡಿ ನಿವಾಸಿ ನಾಗೇಶ್ ಬಿ.ಎಸ್.(23) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಪ್ಯಾರಾಮೆಡಿಕ್ ಇಂಟರ್ನ್ ಆಗಿರುವ ನಾಗೇಶ್ ನಿನ್ನೆ ರಾತ್ರಿ ಕರ್ತವ್ಯದಲ್ಲಿದ್ದ ಇವರು ವಿಶ್ರಾಂತಿ ಕೊಠಡಿಗೆ ತೆರಳಿ ಮಲಗಿದ್ದವರು ಅಲ್ಲೆ ಕೊನೆಯುಸಿರೆಳೆದಿದ್ದಾರೆ.

ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

- Advertisement -


ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp