Home ಕರಾವಳಿ ಮಂಗಳೂರು: ಅರೆ ವೈದ್ಯಕೀಯ ವಿದ್ಯಾರ್ಥಿ ಮಲಗಿದ್ದಲ್ಲೇ ಮೃತ್ಯು

ಮಂಗಳೂರು: ಅರೆ ವೈದ್ಯಕೀಯ ವಿದ್ಯಾರ್ಥಿ ಮಲಗಿದ್ದಲ್ಲೇ ಮೃತ್ಯು

ಉಳ್ಳಾಲ: ಅರೆ ವೈದ್ಯಕೀಯ ತರಬೇತಿ ವಿದ್ಯಾರ್ಥಿಯೋರ್ವ ಮಲಗಿದ್ದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ರಾತ್ರಿ ದೇರಳಕಟ್ಟೆಯಲ್ಲಿ ನಡೆದಿದೆ.

ಉಪ್ಪಿನಂಗಡಿ ನಿವಾಸಿ ನಾಗೇಶ್ ಬಿ.ಎಸ್.(23) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಪ್ಯಾರಾಮೆಡಿಕ್ ಇಂಟರ್ನ್ ಆಗಿರುವ ನಾಗೇಶ್ ನಿನ್ನೆ ರಾತ್ರಿ ಕರ್ತವ್ಯದಲ್ಲಿದ್ದ ಇವರು ವಿಶ್ರಾಂತಿ ಕೊಠಡಿಗೆ ತೆರಳಿ ಮಲಗಿದ್ದವರು ಅಲ್ಲೆ ಕೊನೆಯುಸಿರೆಳೆದಿದ್ದಾರೆ.

ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.


ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version