ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆಗೆ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ: ಪರಮೇಶ್ವರ್

Prasthutha|

- Advertisement -

ಬೆಂಗಳೂರು: ಮಹಿಳೆಯರ ಸುರಕ್ಷತೆಗೆ ನಗರದ 30 ಕಡೆಗಳಲ್ಲಿ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ ಜಾರಿ ಮಾಡಿದ್ದೇವೆ. ನಗರದ ನಿಗದಿತ ಪ್ರದೇಶದಲ್ಲಿ ಅಲಾರಾಂ ಇರಲಿದೆ. ಬಟನ್ ಒತ್ತಿದರೆ ತಕ್ಷಣ ಪೊಲೀಸರು ಸ್ಥಳಕ್ಕೆ ಬರುತ್ತಾರೆ ಎಂದು ಗೃಹ ಸಚಿವ ಡಾ.ಪರಮೇಶ್ವರ್​ ಹೇಳಿದ್ದಾರೆ.

ವಿಧಾನಪರಿಷತ್​ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಉತ್ತರಿಸಿದ ಅವರು, ಅಪರಾಧಿಗಳನ್ನು ಹಿಡಿಯಲು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌ ಕೂಡ ಬಳಕೆ ಮಾಡುತ್ತಿದ್ದೇವೆ. ಪೊಲೀಸರ ಪ್ರತಿಕ್ರಿಯೆ ಸಮಯ ಕೂಡ ವೇಗವಾಗಿ ಮಾಡುವ ಪ್ರಯತ್ನ ನಡೆದಿದೆ ಎಂದು ಹೇಳಿದ್ದಾರೆ.

Join Whatsapp