ಪರಶುರಾಮ ಥೀಮ್ ಪಾರ್ಕ್ ಹಗರಣ: ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅಮಾನತು

Prasthutha|

ಉಡುಪಿ: ರಾಜ್ಯದಲ್ಲಿ ವಿವಾದ ಸೃಷ್ಟಿಸಿದ್ದ ಕಾರ್ಕಳದ ಪರಶುರಾಮ ಥೀಂ ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿನ ಅವ್ಯವಹಾರದಲ್ಲಿ ಕಾಮಗಾರಿಯನ್ನು ನಿರ್ವಹಿಸಿದ ನಿರ್ಮಿತ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ರನ್ನು ಅಮಾನತು ಗೊಳಿಸಿ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

- Advertisement -


ಕಾರ್ಕಳದ ಉಮಿಕಲ್ ಬೆಟ್ಟದಲ್ಲಿ ಪರಶುರಾಮ ದೇವರ ಕಂಚಿನ ಪ್ರತಿಮೆಯ ಸ್ಥಾಪನೆ ಮತ್ತು ಥೀಂ ಪಾರ್ಕ್ ನ ನಿರ್ಮಾಣದ ಕಾಮಗಾರಿ ಯನ್ನು ಉಡುಪಿಯ ನಿರ್ಮಿತಿ ಕೇಂದ್ರಕ್ಕೆ ವಹಿಸಲಾಗಿತ್ತು. ಸದ್ರಿ ಕಾಮಗಾರಿಗೆ ಅಂದಾಜು ಮೊತ್ತ ರೂ. 1105.00 ಲಕ್ಷಕ್ಕೆ, ಆಡಳಿತ್ಮಾತಕ ಮಂಜೂರಾತಿಗೊಂಡಿದ್ದು ಈ ಪೈಕಿ ರೂ.672.00ಲಕ್ಷ ಅನುದಾನ ಈಗಾಗಲೇ ಬಿಡುಗಡೆಯಾಗಿ, ಸದ್ರಿ ಕಾಮಗಾರಿ ಪೂರ್ಣಗೊಳಿಸದೇ, ಸಂಬಂದಪಟ್ಟ ಇಲಾಖೆಗೆ ಹಸ್ತಾಂತರ ಮಾಡದೇ ಉದ್ಘಾಟನಾ ಕಾರ್ಯಕ್ರಮವನ್ನು ಮಾಡಿರುವುದರಿಂದ ನಿರ್ಮಾಣದ ಗುಣಮಟ್ಟದ ಬಗ್ಗೆ, ಮತ್ತು ಧಾರ್ಮಿಕ ಭಾವನೆಗಳಿಗೆ ಅಪಚಾರವಾಗುತ್ತಿರುವ ಬಗ್ಗೆ, ಪರ/ವಿರೋಧ ಚರ್ಚೆಗಳು ನಡೆಯುತ್ತಿರುವ ಕುರಿತು ವಿವಿಧ ಪತ್ರಿಕೆ /ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು ಕಾಮಗಾರಿಯ ಬಗೆ ಪೊಲೀಸ್ ಇಲಾಖೆ ಮತ್ತು ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನ್ ದಾಸ್ ವಿಚಾರಣಾ ಆಯೋಗದಲ್ಲಿ ತನಿಖಾ ಹಂತದಲ್ಲಿದ್ದು ಹಾಗೂ ಮಾನ್ಯ ಉಚ್ಚ ನ್ಯಾಯಲಯದಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ತನಿಖೆಗೆ ಅಡ್ಡಿ ಉಂಟು ಮಾಡುವ ಅಥವಾ ತನಿಖೆಯಲ್ಲಿ ಹಸ್ತಾಕ್ಷೇಪ ಮಾಡುವ ಸಾಧ್ಯತೆಗಳಿರುವುದರಿಂದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಇವರನ್ನು ಅಮಾನತುಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.



Join Whatsapp