ಕಾರವಾರ: ಸಂಘಪರಿವಾರದ ಕಾರ್ಯಕರ್ತ ಪರೇಶ್ ಮೇಸ್ತಾ ಹತ್ಯೆ ಪ್ರಕರಣದ ಆರೋಪಿ ಅಜಾದ್ ಅಣ್ಣಿಗೇರಿಗೆ ಬಿಜೆಪಿ ಸರ್ಕಾರ ನೀಡಿದ್ದ ವಕ್ಫ್ ಬೋರ್ಡ್ನ ಜಿಲ್ಲಾ ಉಪಾಧ್ಯಕ್ಷ ಸ್ಥಾನವನ್ನು ತಡೆಹಿಡಿಯಲಾಗಿದೆ.
ಸಂಘಪರಿವಾರದ ಕಾರ್ಯಕರ್ತ ಪರೇಶ್ ಮೇಸ್ತಾ ಹತ್ಯೆ ಪ್ರಕರಣದ ಪ್ರಧಾನ ಆರೋಪಿಯಾಗಿದ್ದ ಅಜಾದ್ ಅಣ್ಣಿಗೇರಿಗೆ ವಕ್ಫ್ ಬೋರ್ಡ್ ಜಿಲ್ಲಾ ಉಪಾಧ್ಯಕ್ಷ ಸ್ಥಾನವನ್ನು ನೀಡಿದ ಬಳಿಕ ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ, ಕರಾವಳಿ ಭಾಗದ ಶಾಸಕರು ಸಹ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಆಯ್ಕೆ ವಿರುದ್ಧ ಅಪಸ್ವರ ಕೇಳಿ ಬಂದ ಹಿನ್ನೆಲೆ ರಾಜ್ಯ ವಕ್ಫ್ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಂದು ಈ ಆದೇಶ ತಡೆ ಹಿಡಿದು ಆದೇಶ ಹೊರಡಿಸಿದ್ದಾರೆ