Home ಟಾಪ್ ಸುದ್ದಿಗಳು ಚರ್ಚೆಯಿಲ್ಲದೆ ಕೃಷಿ ಕಾಯ್ದೆ ಹಿಂಪಡೆಯಲು ಒಪ್ಪಿದ ಸಂಸತ್ತು, ಕಾಂಗ್ರೆಸ್ ಪ್ರತಿಭಟನೆ

ಚರ್ಚೆಯಿಲ್ಲದೆ ಕೃಷಿ ಕಾಯ್ದೆ ಹಿಂಪಡೆಯಲು ಒಪ್ಪಿದ ಸಂಸತ್ತು, ಕಾಂಗ್ರೆಸ್ ಪ್ರತಿಭಟನೆ

ನವದೆಹಲಿ: ಚಳಿಗಾಲದ ಅಧಿವೇಶನದ ಮೊದಲ ದಿನ ಗುರು ನಾನಕ್ ಮತ್ತು ಇಂದಿರಾ ಗಾಂಧಿಯವರ ಜನ್ಮ ದಿನದಂದು ಪ್ರಧಾನಿ ಮೋದಿಯವರು ಘೋಷಣೆ ಮಾಡಿದ್ದಂತೆ ಲೋಕ ಸಭೆಯು ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಲು ಒಪ್ಪಿಗೆ ನೀಡಿತು.


ಚರ್ಚೆಗೆ ಅವಕಾಶ ನೀಡದ ಕಾರಣ ಕಾಂಗ್ರೆಸ್ ಪಕ್ಷದವರು ಲೋಕ ಸಭೆಯ ಹೊರಗೆ ಪ್ರತಿಭಟನೆ ನಡೆಸಿದರು. ಈ ಕೃಷಿ ಕಾಯ್ದೆಗಳನ್ನು ಚರ್ಚೆ ಇಲ್ಲದೆಯೇ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲಾಗಿತ್ತು.


ರಾಜ್ಯಸಭೆಯಲ್ಲಿ ಈ ಕಾಯ್ದೆ ವಾಪಾಸಾತಿ ಪರ ಮಸೂದೆಯನ್ನು ಮಧ್ಯಾಹ್ನ ಎರಡು ಗಂಟೆಗೆ ಸಚಿವ ಪ್ರಹ್ಲಾದ ಜೋಶಿ ಮಂಡಿಸುವರು ಎನ್ನಲಾಗಿದೆ. ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿಯವರು ಚರ್ಚೆಗೆ ಅವಕಾಶ ಮಾಡಿಕೊಡಲೇ ಬೇಕು ಎಂದು ಪಟ್ಟು ಹಿಡಿದಾಗ ಸಭಾಪತಿ ಓಂ ಬಿರ್ಲಾ ಅವರು ಮಧ್ಯಾಹ್ನದವರೆಗೆ ಲೋಕ ಸಭೆಯನ್ನು ಮುಂದೂಡಿದ

Join Whatsapp
Exit mobile version