ಸಂಸತ್​ ಭವನವನ್ನು ಪ್ರಧಾನಿ ಬದಲಾಗಿ ರಾಷ್ಟ್ರಪತಿಗಳು ಉದ್ಘಾಟನೆ ಮಾಡಬೇಕು: ರಾಹುಲ್​ ಗಾಂಧಿ

Prasthutha|

ನವದೆಹಲಿ: ನೂತನ ಸಂಸತ್​ ಭವನವನ್ನು ಪ್ರಧಾನಿ ಬದಲಾಗಿ ರಾಷ್ಟ್ರಪತಿಗಳು ಉದ್ಘಾಟನೆ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

- Advertisement -

ಬಗ್ಗೆ ಟ್ವೀಟ್​ ಮಾಡಿರುವ ರಾಹುಲ್ ​ಗಾಂಧಿ ‘ನೂತನ ಸಂಸತ್ ಭವನವನ್ನು ರಾಷ್ಟ್ರಪತಿಗಳು ಉದ್ಘಾಟಿಸಬೇಕೇ ಹೊರತು ಪ್ರಧಾನಿಯಲ್ಲ’ ಎಂದಿದ್ದಾರೆ. ಗುರುವಾರವಷ್ಟೇ ಪ್ರಧಾನಿ ಮೋದಿ ಅವರನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಭೇಟಿಯಾಗಿ ಹೊಸ ಕಟ್ಟಡವನ್ನು ಮೇ 28 ರಂದು ಉದ್ಘಾಟಿಸಲು ಆಹ್ವಾನವಿತ್ತ ಬೆನ್ನಲ್ಲೇ ಅವರು ಈ ಪ್ರಶ್ನೆ ಎತ್ತಿದ್ದಾರೆ.

Join Whatsapp