ಸಂಸತ್ತಿನ ಉಭಯ ಸದನಗಳ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

Prasthutha|

ನವದೆಹಲಿ: ನವೆಂಬರ್ 29ರಿಂದ ಆರಂಭಗೊಂಡಿದ್ದ ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ನಿಗದಿಯಂತೆ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

- Advertisement -

ರಾಜ್ಯಸಭೆಯ ಸಭಾಪತಿ ವೆಂಕಯ್ಯ ನಾಯ್ಡು ಅವರು ಸದನದ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಮೇಲ್ಮನೆಯು ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿಲ್ಲ. ಅದರ ಕಾರ್ಯದಕ್ಷತೆಯನ್ನು ವೃದ್ಧಿಸುವ ಕುರಿತು ಪ್ರತಿಯೊಬ್ಬರೂ ಯೋಚಿಸಬೇಕು ಎಂದು ಹೇಳಿ ರಾಜ್ಯಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡುವುದಾಗಿ ತಿಳಿಸಿದರು.

ಮಂಗೋಲಿಯಾದ ನಿಯೋಗ ಸದನದ ಕಾರ್ಯವೈಖರಿಯನ್ನು ವೀಕ್ಷಿಸಿದೆ ಎಂದು ಲೋಕಸಭೆಯ ಸ್ಪೀಕರ್ ಓಮ್ ಬಿರ್ಲಾ ತಿಳಿಸಿದರು. ಅವರು ಭಾಗವಹಿಸಿದ್ದಕ್ಕಾಗಿ ಧನ್ಯವಾದ ಸಮರ್ಪಿಸಿದರು. ಇದೇ ವೇಳೆ ಮಾಧ್ಯಮಗಳಿಗೆ ತಮ್ಮ ಕೃತಜ್ಞತೆಯನ್ನು ತಿಳಿಸಿ ಲೋಕಸಭೆಯ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.

- Advertisement -

ಪ್ರಸಕ್ತ ಅಧಿವೇಶನದಲ್ಲಿ ಆಧಾರ್ ಕಾರ್ಡ್ ಅನ್ನು ವೋಟರ್ ಐಡಿ ಜೊತೆ ಜೋಡಿಸುವ ವಿಧೇಯಕ ಸೇರಿದಂತೆ ಹಲವು ಮಹತ್ವದ ಮಸೂದೆಗಳಿಗೆ ಅಂಗೀಕಾರ ಪಡೆಯಲಾಗಿದೆ. ಹುಡುಗಿಯರ ಮದುವೆ ವಯಸ್ಸನ್ನು 18ರಿಂದ 21ಕ್ಕೆ ಏರಿಸುವ ವಿಧೇಯಕವನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ. ಆದರೆ ಅದನ್ನು ಸ್ಥಾಯಿ ಸಮಿತಿಗೆ ಕಳುಹಿಸಲಾಗಿದೆ.

Join Whatsapp