ಇಂದು ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ

Prasthutha|

ಹೊಸದಿಲ್ಲಿ: ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ದೊರೆತ ಬೆನ್ನಲ್ಲೇ ಇಂದು ರಾಜ್ಯಸಭೆಯಲ್ಲೂ ಕೂಡ ಮಸೂದೆ ಮಂಡನೆಯಾಗಲಿದೆ.

- Advertisement -

ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ‘ನಾರಿ ಶಕ್ತಿ ವಂದನ್’ ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ಬಹುತೇಕ ಪಕ್ಷಗಳು ಮಹಿಳಾ ಮೀಸಲಾತಿ ಮಸೂದೆಯನ್ನು ಬೆಂಬಲಿಸಿದ್ದು, ವಿಧೇಯಕದ ಪರವಾಗಿ 454 ಸಂಸದರು ಮತ ಚಲಾಯಿಸಿದರೆ, ಇಬ್ಬರು ಸಂಸದರು ಮಾತ್ರ ಈ ಮಸೂದೆಯ ವಿರುದ್ಧವಾಗಿ ಮತ ಚಲಾಯಿಸಿದ್ದರು.

ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ 213 ಸದಸ್ಯರ ಬೆಂಬಲದ ಅಗತ್ಯವಿತ್ತು. ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ನಾರಿ ಶಂಕ್ತಿವಂದನ್ ವಿಧೇಯಕವನ್ನು ಕೇಂದ್ರ ಸರ್ಕಾರ ಇಂದು ರಾಜ್ಯಸಭೆಯಲ್ಲಿ ಮಂಡಿಸಲಿದೆ. ಈ ಮಸೂದೆಯ ಮೂಲಕ ಸಂವಿಧಾನದ 330 ಹಾಗೂ 332ನೇ ವಿಧಿಗಳಿಗೆ ತಿದ್ದುಪಡಿ ತರಲಾಗುತ್ತಿದ್ದು, ಈ ಮೂಲಕ ಲೋಕಸಭೆಯ 543 ಸ್ಥಾನಗಳ ಪೈಕಿ 181 ಸ್ಥಾನಗಳನ್ನು ಮತ್ತು ರಾಜ್ಯ ವಿಧಾನಸಭೆಗಳಲ್ಲಿ 4,109 ಸ್ಥಾನಗಳ ಪೈಕಿ 1370 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗುತ್ತದೆ.

Join Whatsapp