ವಿಶೇಷಚೇತನ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ಪರಶುರಾಮ ಮಡಿವಾಳ ಬಂಧನ

Prasthutha|

ಹಾವೇರಿ: ವಿಶೇಷಚೇತನ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಹಾನಗಲ್ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
ಪರಶುರಾಮ ಮಡಿವಾಳ ಮತ್ತು ಯಶವಂತ ಅತ್ಯಾಚಾರ ಎಸಗಿರುವ ಆರೋಪಿಗಳು ಎಂದು ತಿಳಿದು ಬಂದಿದೆ. ಪ್ರಮುಖ ಆರೋಪಿ ಪರಶುರಾಮ ಮಡಿವಾಳನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪರಾರಿಯಾಗಿರುವ ಆರೋಪಿ ಯಶವಂತಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಯುವತಿಯ ಬಾಯಿಗೆ ಬಟ್ಟೆ ತುರುಕಿ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬುದು ತನಿಖೆಯಿಂದ ತಿಳಿದು ಬಂದಿದೆ.
ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp