Home ಟಾಪ್ ಸುದ್ದಿಗಳು ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ: ಕುಮಾರಸ್ವಾಮಿ

ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ: ಕುಮಾರಸ್ವಾಮಿ

ಶಿವಮೊಗ್ಗ: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಆದರೆ, ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಅವರು ನೀಡಿಲ್ಲ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಲಿ ಎಂಬ ಅಭಿಪ್ರಾಯವನ್ನು ಪುನರುಚ್ಚರಿಸಿದ್ದಾರೆ.
ಕಾನೂನು ಎಲ್ಲರಿಗೂ ಸಮಾನವಾಗಿದೆ. ತನಿಖೆಗೆ ಸರ್ಕಾರ ಈಗಾಗಲೇ ಎಸ್ಐಟಿ ರಚನೆ ಮಾಡಿದೆ. ತನಿಖೆಯಿಂದ ಸತ್ಯ ಹೊರಬರಲಿ. ಯಾರೇ ತಪ್ಪು ಮಾಡಿರಲಿ ಅವರಿಗೆ ಶಿಕ್ಷೆ ಆಗಲಿ ಎಂದು ಹೇಳಿದ್ದಾರೆ.

Join Whatsapp
Exit mobile version