ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅವಿರೋಧವಾಗಿ ಮರಾಠಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲಾಗಿದೆ. ಮರಾಠರಿಗೆ ಸರ್ಕಾರಿ ಉದ್ಯೋಗ, ಶಿಕ್ಷಣದಲ್ಲಿ ಶೇಕಡ 10ರಷ್ಟು ಮೀಸಲಾತಿ ನೀಡುವ ಮಸೂದೆ ಇದಾಗಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ವಿಶೇಷ ಅಧಿವೇಶನದಲ್ಲಿ ಮರಾಠಾ ಮೀಸಲಾತಿ ಮಸೂದೆಯನ್ನು ಮಂಡಿಸಿದರು. ಮರಾಠಾ ಮೀಸಲಾತಿ ವಿಧೇಯಕ ಮಂಡಿಸಲು ಮಹಾರಾಷ್ಟ್ರ ಸರ್ಕಾರ ಇಂದು ಒಂದು ದಿನದ ವಿಶೇಷ ಅಧಿವೇಶನ ಕರೆದಿತ್ತು. ಹಿಂದುಳಿದ ವರ್ಗಗಳ ಆಯೋಗ ನೀಡಿದ ವರದಿಗೆ ಸಚಿವ ಸಂಪುಟ ಸಮ್ಮತಿಸಿದೆ. ಮರಾಠ ಸಮುದಾಯಕ್ಕೆ ಶೇಕಡ 10ರಷ್ಚು ಮೀಸಲಾತಿ ನೀಡುವ ಬಗ್ಗೆ ಸರ್ಕಾರ ಅನುಮೋದನೆ ನೀಡಿದೆ.
ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಮಸೂದೆ 2024 ಮೀಸಲಾತಿ ಜಾರಿಗೆ ತಂದ ಮೇಲೆ 10 ವರ್ಷಗಳ ನಂತರ ಅದನ್ನು ಪರಿಶೀಲನೆಗೆ ತೆಗೆದುಕೊಳ್ಳಬಹುದು ಎಂದು ಪ್ರಸ್ತಾಪಿಸಲಾಗಿದೆ. ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮರಾಠ ಸಮುದಾಯಕ್ಕೆ 10 ಪ್ರತಿಶತ ಮೀಸಲಾತಿಯನ್ನು ಪ್ರಸ್ತಾಪಿಸಿದೆ.