ಮಂಗಳೂರು | ವಿಮಾನದ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿದ ಆರೋಪ: ಯುವಕನ ವಿರುದ್ಧ ದೂರು

Prasthutha|

ಮಂಗಳೂರು: ವಿಮಾನದ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಯುವಕನ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

ಮುಹಮ್ಮದ್ ಬಿಸಿ (24) ವಿರುದ್ಧ ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಸೆಕ್ಯೂರಿಟಿ ಕೋ- ಆಡಿನೇಟರ್ ಆಗಿರುವ ಸಿದ್ದಾರ್ಥದಾಸ್ ಅವರು ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಮೇ 8ರಂದು ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಮುಹಮ್ಮದ್ ಬಿಸಿ ಸಹ ಪ್ರಯಾಣಿಕರಿಗೆ ವಿನಾಕಾರಣ ತೊಂದರೆ ನೀಡಿದ್ದಾರೆ. ಅಲ್ಲದೆ, ವಿಮಾನ ನಿಲ್ದಾಣದ ಸಿಬ್ಬಂದಿಗೂ ಅನುಚಿತವಾಗಿ ವರ್ತಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Join Whatsapp