Home ಟಾಪ್ ಸುದ್ದಿಗಳು ವಿಮಾನದಲ್ಲಿ ಬೀಡಿ ಸೇದಿದ ಪ್ರಯಾಣಿಕನ ಬಂಧನ

ವಿಮಾನದಲ್ಲಿ ಬೀಡಿ ಸೇದಿದ ಪ್ರಯಾಣಿಕನ ಬಂಧನ

ಬೆಂಗಳೂರು: ಕೋಲ್ಕತ್ತಾದಿಂದ ಬೆಂಗಳೂರಿಗೆ ಬಂದಿದ್ದ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಬೀಡಿ ಸೇರಿದ ಹಿನ್ನೆಲೆಯಲ್ಲಿ ಪ್ರಯಾಣಿಕರೊಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ.


ವ್ಯಕ್ತಿಯ ವಿರುದ್ಧ ಏರ್‌ಕ್ರಾಫ್ಟ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.


ಐಪಿಸಿ ಸೆಕ್ಷನ್ 336 ಅಡಿಯಲ್ಲಿ ಸಾರ್ವಜನಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಮತ್ತು ಸೆಕ್ಷನ್ 25 (3b) ಅಡಿಯಲ್ಲಿ ವಿಮಾನದೊಳಗೆ ಧೂಮಪಾನ ಮಾಡದಿರುವ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಏರ್‌ಕ್ರಾಫ್ಟ್ ನಿಯಮಗಳು 1937 ರ ಅಡಿಯಲ್ಲಿ KIA ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.

Join Whatsapp
Exit mobile version