Home ಟಾಪ್ ಸುದ್ದಿಗಳು ದಟ್ಟ ಮಂಜಿನಿಂದ ವಿಮಾನ ವಿಳಂಬ ಘೋಷಿಸಿದ ಪೈಲಟ್ ಮೇಲೆ ಪ್ರಯಾಣಿಕನಿಂದ ಹಲ್ಲೆ

ದಟ್ಟ ಮಂಜಿನಿಂದ ವಿಮಾನ ವಿಳಂಬ ಘೋಷಿಸಿದ ಪೈಲಟ್ ಮೇಲೆ ಪ್ರಯಾಣಿಕನಿಂದ ಹಲ್ಲೆ

ನವದೆಹಲಿ: ಉತ್ತರ ಭಾರತದಲ್ಲಿ ದಟ್ಟವಾದ ಮಂಜಿನ ಪರಿಸ್ಥಿತಿಯಿಂದಾಗಿ ವಿಮಾನಗಳ ಸಂಚಾರಲದಲ್ಲಿ ವಿಳಂಬವಾಗಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಗೋ ವಿಮಾನದ ಪೈಲಟ್ ವಿಳಂಬದ ಬಗ್ಗೆ ಘೋಷಣೆ ಮಾಡುತ್ತಿದ್ದಾಗ ಪ್ರಯಾಣಿಕನೊಬ್ಬನು ತನ್ನ ಸೀಟಿನಿಂದ ಧಾವಿಸಿ ದೈಹಿಕವಾಗಿ ಹಲ್ಲೆ ಮಾಡಿದ ಘಟನೆ ನಡೆದಿದೆ.ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವ್ಯಕ್ತಿಯೊಬ್ಬರು ಕೊನೆಯ ಸಾಲಿನಿಂದ ಏಕಾಏಕಿ ಧಾವಿಸಿ ಪೈಲಟ್ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವ್ಯಕ್ತಿ ಕ್ಯಾಪ್ಟನ್ ಮೇಲೆ ಹಲ್ಲೆ ಮಾಡಿದ ನಂತರ, ಇನ್ನೊಬ್ಬ ಸಿಬ್ಬಂದಿ ಕಣ್ಣೀರು ಸುರಿಸುತ್ತಾ ಪ್ರಯಾಣಿಕರಿಗೆ ನೀವು ಈ ರೀತಿ ಮಾಡುವಂತಿಲ್ಲ ಎಂದು ಹೇಳುವುದನ್ನು ಕಾಣಬಹುದು.

ವಿಡಿಯೋ ವೈರಲ್ ಆದ ನಂತರ, ಸಾಮಾಜಿಕ ಮಾಧ್ಯಮ ಬಳಕೆದಾರರು ಪೈಲಟ್ ಮೇಲೆ ದೈಹಿಕ ಹಲ್ಲೆ ಮಾಡಿದ ಪ್ರಯಾಣಿಕನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದಾಗಿ ಹಲವಾರು ವಿಮಾನಗಳು ವಿಳಂಬವಾಗಿವೆ. ಇಂಡಿಗೋ ಸಹ ಅಡೆತಡೆಗಳ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದೆ. ಉತ್ತರ ಭಾರತದಾದ್ಯಂತ ಕಡಿಮೆ ಗೋಚರತೆ ಮತ್ತು ದಟ್ಟವಾದ ಮಂಜು ಪರಿಸ್ಥಿತಿಗಳಿಂದಾಗಿ ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದೆ. ನಮ್ಮ ಸಿಬ್ಬಂದಿ ವಿವಿಧ ವಿಮಾನ ನಿಲ್ದಾಣಗಳಲ್ಲಿನ ವಿಳಂಬ ಮತ್ತು ರದ್ದತಿಗಳ ಬಗ್ಗೆ ಪ್ರಯಾಣಿಕರಿಗೆ ತಿಳಿಸಿದ್ದಾರೆ. ಪ್ರಯಾಣಿಕರಿಗೆ ಸಹಾಯ ಮಾಡಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ನಮ್ಮ ಪ್ರಯಾಣಿಕರಿಗೆ ಉಂಟಾದ ಯಾವುದೇ ಅನಾನುಕೂಲತೆಗಾಗಿ ನಾವು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ ಎಂದು ತಿಳಿಸಿದೆ.

Join Whatsapp
Exit mobile version