ಚಿಕ್ಕೋಡಿ: ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯ ಸರ್ಕಾರಿ ಬಸ್ ಗಳ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಕಲ್ಲು ತೂರಾಟ ನಡೆಸಿದ್ದಾನೆ.
ಘಟನೆಯಲ್ಲಿ ಕಾಮತ್ಯಾಟ್ಟಿ ಗ್ರಾಮದ ಪ್ರಯಾಣಿಕ ರಮೇಶ್ ಚಿವಟೆಗೆ ಗಾಯಗೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ (ಹತ್ತರಕಿ NH4) ಬೆನಕನಹೊಳಿ ಗ್ರಾಮದ ಬಳಿ ಹುಕ್ಕೇರಿ – ಬೆಳಗಾವಿ ತಡೆರಹಿತ ಬಸ್ ಮೇಲೆ ದುಷ್ಕರ್ಮಿಯೊಬ್ಬ ಕಲ್ಲು ತೂರಾಟ ನಡೆಸಿದ್ದಾನೆ.
ಮತ್ತೊಂದೆಡೆ, ಮುಂಬಯಿಯಿಂದ ಹುಬ್ಬಳ್ಳಿ ಮಾರ್ಗವಾಗಿ ಸಂಚರಿಸುವ ಮಹಾರಾಷ್ಟ್ರ ಸಾರಿಗೆ ಬಸ್ ಮೇಲೂ ಕಲ್ಲು ತೂರಾಟ ನಡೆಸಲಾಗಿದೆ. ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ. ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ 112 ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ.