ನವದೆಹಲಿ: ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ತನ್ನ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದು ಹೇಳಿದ್ದು, ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನವನ್ನು ಪಾಟ್ನಾ ವಿಮಾನ ನಿಲ್ದಾಣಕ್ಕೆ ಹಿಂತಿರುಗಿಸಲಾಗಿದೆ ಎಂದು ವರದಿಯಾಗಿದೆ.
ನಿನ್ನೆ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನ (6e 2126)ದಲ್ಲಿದ್ದ ಪ್ರಯಾಣಿಕರೊಬ್ಬರು ತನ್ನ ಬ್ಯಾಗ್ನಲ್ಲಿ ಬಾಂಬ್ ಇದೆ ಎಂದು ಹೇಳಿಕೊಂಡಿದ್ದಾರೆ. ಇದನ್ನು ಕೇಳಿದ ಸಿಬ್ಬಂದಿಗಳು ಕೂಡಲೇ ವಿಮಾನವನ್ನು ಪಾಟ್ನಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಿಸಿದ್ದಾರೆ.
ತುರ್ತು ಲ್ಯಾಂಡಿಂಗ್ ನಂತರ ಬಾಂಬ್ ಸ್ಕ್ವಾಡ್ ಮತ್ತು ಪೊಲೀಸರು ಬ್ಯಾಗ್ ಪರಿಶೀಲನೆ ನಡೆಸಿದರು. ಆದರೆ ಬ್ಯಾಗ್ ನಲ್ಲಿ ಬಾಂಬ್ ಪತ್ತೆಯಾಗಿರಲಿಲ್ಲ. ಹೀಗಾಗಿ, ಪ್ರಯಾಣಿಕರನ್ನು ವಶಕ್ಕೆ ಪಡೆಯಲಾಗಿದ್ದು, ವಿಮಾನವನ್ನು ಹೆಚ್ಚಿನ ತಪಾಸಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಎಲ್ಲಾ ಪ್ರಯಾಣಿಕರನ್ನು ಪಾಟ್ನಾ ವಿಮಾನ ನಿಲ್ದಾಣದಲ್ಲಿ ದೆಹಲಿಗೆ ಹೋಗುವ ಇಂಡಿಗೋ ವಿಮಾನದಿಂದ (6e 2126) ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ ಎಂದು ತಿಳಿದು ಬಂದಿದೆ.