ಪಾಕಿಸ್ತಾನದಲ್ಲಿ ರೈಲು ಅವಘಡ | 50 ಸಾವು; 70 ಮಂದಿಗೆ ಗಾಯ

Prasthutha|

ನವದೆಹಲಿ : ಪಾಕಿಸ್ತಾನದ ದಕ್ಷಿಣ ಸಿಂಧ್‌ ಪ್ರಾಂತ್ಯದಲ್ಲಿ ಎರಡು ಪ್ರಯಾಣಿಕ ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ 50 ಮಂದಿ ಸಾವಿಗೀಡಾಗಿ, 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗಾಗಿ ಸೇನೆ ಮತ್ತು ಅರೆಸೇನಾ ಪಡೆಗಳನ್ನು ಸ್ಥಳಕ್ಕೆ ಕರೆಸಲಾಗಿದೆ.

- Advertisement -

ಮಿಲ್ಲತ್‌ ಎಕ್ಸ್‌ ಪ್ರೆಸ್‌ ರೈಲು ಕರಾಚಿಯಿಂದ ಸರ್ಗೋಡಗೆ ಪ್ರಯಾಣಿಸುತ್ತಿದ್ದ ವೇಳೆ ಹಳಿ ತಪ್ಪಿ ಪಕ್ಕದ ಹಳಿಗೆ ಬಿದ್ದಿತ್ತು. ಈ ವೇಳೆ ರಾವಲ್ಪಿಂಡಿಯಿಂದ ಕರಾಚಿಗೆ ಬರುತ್ತಿದ್ದ ಬರುತ್ತಿದ್ದ ಸರ್‌ ಸಯ್ಯದ್‌ ಎಕ್ಸ್‌ ಪ್ರೆಸ್‌ ರೈಲು ಬಂದು ಢಿಕ್ಕಿ ಹೊಡೆದಿದೆ.

ಸಿಂಧ್‌ ಪ್ರಾಂತ್ಯದ ಘೋಟ್ಕಿ ಜಿಲ್ಲೆಯ ಧರ್ಕಿ ಸಮೀಪ ಈ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.



Join Whatsapp