Home ಟಾಪ್ ಸುದ್ದಿಗಳು ಪತಂಜಲಿ ವಿಚಾರ: ಅಶೋಕ್‌ಗೆ ಸವಾಲ್ ಹಾಕಿದ ದಿನೇಶ್ ಗುಂಡೂರಾವ್

ಪತಂಜಲಿ ವಿಚಾರ: ಅಶೋಕ್‌ಗೆ ಸವಾಲ್ ಹಾಕಿದ ದಿನೇಶ್ ಗುಂಡೂರಾವ್

ತುರಿಕೆ ರೋಗ ಬಂದಂತೆ ವರ್ತಿಸುತ್ತಿರುವ ವಿಪಕ್ಷ ನಾಯಕ ಆರ್‌.ಅಶೋಕ್‌ ನನಗೆ ಪತಂಜಲಿ ಉತ್ಪನ್ನಗಳ ಬಗ್ಗೆ ಯಾಕಿಷ್ಟು ದ್ವೇಷ ಎಂದು ಪ್ರಶ್ನಿಸಿದ್ದಾರೆ. ಅವರ ಪ್ರಶ್ನೆಗೆ ನಾನು ಉತ್ತರಿಸುವೆ, ನನ್ನ ಪ್ರಶ್ನೆಗಳಿಗೆ ಅವರು ಉತ್ತರಿಸಲಿ. ಇದು ಸವಾಲು‌ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಪತಂಜಲಿ ಉತ್ಪನ್ನಗಳ ಗುಣಮಟ್ಟಕ್ಕೆ ಸಂಬಂಧಪಟ್ಟಂತೆ ಬಾಬಾ ರಾಮ್‌ದೇವ್‌ ಮತ್ತು ಆಚಾರ್ಯ ಬಾಲಕೃಷ್ಣ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಹಿನ್ನೆಲೆ, ಕರ್ನಾಟಕದಲ್ಲಿ ಎಲ್ಲಾ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರು.

ಸಚಿವರ ಈ ಹೇಳಿಕೆಯ ವರದಿಯನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಪ್ರತಿಪಕ್ಷ ನಾಯಕ ಆರ್‌. ಅಶೋಕ್, ಈ ಹಲಾಲ್ ಕಟ್ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು, ಬಿಸಿನೆಸ್ ಗಳು ಬೆಳೆದರೆ ಸಹಿಸೋದೇ ಇಲ್ಲ. ಸಮಸ್ತ ಭಾರತೀಯರ ಅಚ್ಚುಮೆಚ್ಚಿನ ಬ್ರ್ಯಾಂಡ್ ಆಗಿ ಬೆಳೆಯುತ್ತಿರುವ ಬಾಬಾ ರಾಮದೇವ್ ಅವರ ಪತಂಜಲಿ ಮೇಲೆ ಈಗ ಕಾಂಗ್ರೆಸ್ ಸರ್ಕಾರದ ವಕ್ರದೃಷ್ಟಿ ಬಿದ್ದಿದೆ. ಮಾನ್ಯ ದಿನೇಶ್ ಗುಂಡೂರಾವ್ ಅವರೇ, ಪತಂಜಲಿ ಉತ್ಪನ್ನಗಳ ಮೇಲೆ ನಿಮಗೇಕಿಷ್ಟು ದ್ವೇಷ ಎಂದು ಪ್ರಶ್ನಿಸಿದ್ದರು.

ಅಶೋಕ್ ಅವರ ಪೋಸ್ಟ್‌ಗೆ ತಿರುಗೇಟು ಕೊಟ್ಟಿರುವ ಸಚಿವ ದಿನೇಶ್ ಗುಡೂರಾವ್, ತಪ್ಪು ಜಾಹೀರಾತು ಮೂಲಕ ದೇಶದ ಜನರ ಆರೋಗ್ಯದ ಜೊತೆ ಚೆಲ್ಲಾಟವಾಡಿದ್ದ ಪತಂಜಲಿಯ ಬಾಬಾ ರಾಮ್‌ದೇವ್ ಹಾಗೂ ಬಾಲಕೃಷ್ಣರವರಿಗೆ ಸುಪ್ರೀಂ ಕೋರ್ಟ್ ತೆರೆದ ನ್ಯಾಯಾಲಯದಲ್ಲಿ ಛೀಮಾರಿ ಹಾಕಿ ನೀರಿಳಿಸಿದೆ. ಜೊತೆಗೆ ಈ ಇಬ್ಬರೂ ತಾವು ಮಾಡಿದ್ದ ತಪ್ಪಿಗೆ ಬೇಷರತ್ ಕ್ಷಮೆ ಯಾಚಿಸಿದ್ದರೂ ಸುಪ್ರೀಂ ಅವರ ಕ್ಷಮೆಯನ್ನು ಮಾನ್ಯ ಮಾಡಿಲ್ಲ. ಅದರರ್ಥ, ಪತಂಜಲಿ ಎಂಬ ಸಂಸ್ಥೆ ಜನರ ಅರೋಗ್ಯದ ಜೊತೆ ಆಡಿರುವ ಚೆಲ್ಲಾಟ ಕ್ಷಮೆಗೂ ಅರ್ಹವಲ್ಲ ಎಂಬುದು ಸುಪ್ರೀಂ ಅಭಿಪ್ರಾಯ.ಇಷ್ಟಕ್ಕೆ ತುರಿಕೆ ರೋಗ ಬಂದಂತೆ ವರ್ತಿಸುತ್ತಿರುವ ವಿಪಕ್ಷ ನಾಯಕ ಆರ್‌.ಅಶೋಕ್‌ ನನಗೆ ಪತಂಜಲಿ ಉತ್ಪನ್ನಗಳ ಬಗ್ಗೆ ಯಾಕಿಷ್ಟು ದ್ವೇಷ ಎಂದು ಪ್ರಶ್ನಿಸಿದ್ದಾರೆ. ಅವರ ಪ್ರಶ್ನೆಗೆ ನಾನು ಉತ್ತರಿಸುವೆ, ನನ್ನ ಪ್ರಶ್ನೆಗಳಿಗೆ ಅವರು ಉತ್ತರಿಸಲಿ. ಇದು ಸವಾಲು‌ ಎಂದು ಹೇಳಿದ್ದಾರೆ.

Join Whatsapp
Exit mobile version