ಬೆಂಗಳೂರು: ಆಸ್ಪತ್ರೆಗೆ ದಾಖಲಾಗಲು ರಾಜ್ಯ ಸರ್ಕಾರದಿಂದ ಗೈಡ್ ಲೈನ್ಸ್ ಬಿಡುಗಡೆ ಮಾಡಿದ್ದು, ಕಡ್ಡಾಯವಾಗಿ ಈ ನಿಯಮಗಳನ್ನು ಪಾಲನೆ ಮಾಡಲು ಸೂಚನೆ ನೀಡಲಾಗಿದೆ.ರಾಜ್ಯದಲ್ಲಿ ಕೊರೊನಾ ಮಹಾಸ್ಪೋಟವಾಗಿದ್ದು, ಪ್ರತಿನಿತ್ಯ 30,000 ಕ್ಕಿಂತ ಹೆಚ್ಚು ಮಂದಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಈ ಹಿನ್ನೆಲೆ ರಾಜ್ಯದ ಜನರಿಗೆ ಆಸ್ಪತ್ರೆಗೆ ದಾಖಲಾಗಲು ರಾಜ್ಯ ಸರ್ಕಾರದಿಂದ ಗೈಡ್ ಲೈನ್ಸ್ ಬಿಡುಗಡೆ ಮಾಡಿದ್ದು, ಕಡ್ಡಾಯವಾಗಿ ಈ ನಿಯಮಗಳನ್ನು ಪಾಲನೆ ಮಾಡಲು ಸೂಚನೆ ನೀಡಲಾಗಿದೆ.
ತುರ್ತು ಆರೈಕೆ, ಚಿಕಿತ್ಸೆ ಅಗತ್ಯವಿದ್ದರಷ್ಟೆ ಆಸ್ಪತ್ರೆಗಳಿಗೆ ತೆರಳಬೇಕು. ಸೌಮ್ಯ ಲಕ್ಷಣಗಳಿದ್ದರೆ ಆಸ್ಪತ್ರೆಗಳಿಗೆ ಭೇಟಿ ನೀಡದಂತೆ ಸಲಹೆ ನೀಡಲಾಗಿದೆ. ಆಸ್ಪತ್ರೆಗಳಲ್ಲಿ ಜನದಟ್ಟಣೆ ತಪ್ಪಿಸಲು ರಾಜ್ಯ ಸರ್ಕಾರದಿಂದ ಆದೇಶ ನೀಡಲಾಗಿದ್ದು, ಮುಂದಿನ 2 ವಾರದವರೆಗೆ ಅನ್ವಯವಾಗುವಂತೆ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಮತ್ತೆ ಇಂದು ಕೊರೋನಾ ಮಹಾಸ್ಪೋಟವೇ ಉಂಟಾಗಿದೆ. ಬೆಂಗಳೂರಿನಲ್ಲಿ 22,284 ಸೇರಿದಂತೆ ರಾಜ್ಯಾಧ್ಯಂತ 32,793 ಜನರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಮಾಹಿತಿ ನೀಡಿದ್ದು, ಇದೇ ವೇಳೆ ಅವರು ಕಳೆದ 24 ಗಂಟೆಯಲ್ಲಿ 2,18,479 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.