ಪಾಟ್ನಾ ಹೈಕೋರ್ಟ್ ಸೂಚನೆ; ಬಿಹಾರದಲ್ಲಿ ಲಾಕ್ ಡೌನ್ ಘೋಷಣೆ

Prasthutha|

ಪಾಟ್ನಾ ; ಬಿಹಾರ ಸರ್ಕಾರ ಕೋವಿಡ್ ನಿರ್ವಹಣೆ ಮಾಡಲು ಸಂಪೂರ್ಣ ವಿಫಲವಾಗಿದೆ ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ರಾಜ್ಯದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 5,09,047. ಸೋಮವಾರ ರಾಜ್ಯದಲ್ಲಿ 11,407 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ.
ಪಾಟ್ನಾ ಹೈಕೋರ್ಟ್ ನ್ಯಾಯಮೂರ್ತಿ ಚಕ್ರಧಾರಿ ಶರಣ್ ಸಿಂಗ್, ಮೋಹಿತ್ ಕುಮಾರ್ ಶಾ ನೇತೃತ್ವದ ವಿಭಾಗೀಯ ಪೀಠ ಲಾಕ್ ಡೌನ್ ಜಾರಿಗೆ ತನ್ನಿ, ಇಲ್ಲವಾದರೆ ನಾವೇ ಆದೇಶಿಸುತ್ತೇವೆ ಎಂದು ಬಿಹಾರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

- Advertisement -

ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಗೆ ತರುವ ಅಗತ್ಯವಿದೆ. ಈ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿ ಎಂದು ಅಡ್ವೊಕೇಟ್ ಜನರಲ್ ಲಲಿತ್ ಕಿಶೋರ್‌ಗೆ ಕೋರ್ಟ್ ಸೂಚನೆ ನೀಡಿದೆ. ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಲಿದೆಯೇ? ಅಥವಾ ಕೋರ್ಟ್ ಈ ಕುರಿತು ಆದೇಶಿಸಬೇಕೆ? ಎಂದು ನ್ಯಾಯಾಲಯ ಪ್ರಶ್ನಿಸಿದೆ.

ಲಾಕ್ ಡೌನ್ ಘೋಷಣೆ;
ಸೋಮವಾರ ಪಾಟ್ನಾ ಹೈಕೋರ್ಟ್ ಸೂಚನೆ ನೀಡುತ್ತಿದ್ದಂತೆ ಮಂಗಳವಾರ ಲಾಕ್ ಡೌನ್ ಘೋಷಣೆ ಮಾಡಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶ ಹೊರಡಿಸಿದದ್ದಾರೆ. ಮೇ 15ರ ತನಕ ಲಾಕ್ ಡೌನ್ ಜಾರಿಯಲ್ಲಿರಲಿದೆ ಎಂದು ಹೇಳಿದ್ದಾರೆ.

- Advertisement -

ಸರ್ಕಾರ ಕೋವಿಡ್ ಪರಿಸ್ಥಿತಿ ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ ಎಂದು ಪಾಟ್ನಾ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆಯಾಗಿದೆ. ಅರ್ಜಿಯ ವಿಚಾರಣೆ ನಡೆಸುತ್ತಿರುವ ಕೋರ್ಟ್ ಸರ್ಕಾರ ಕೇವಲ ಕಾಗದದಲ್ಲಿ ಕೆಲಸ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.
ಸೋಮವಾರ ಐಎಂಎ ಸಹ ಬಿಹಾರ ಸರ್ಕಾರವನ್ನು ಲಾಕ್ ಡೌನ್ ಘೋಷಣೆ ಮಾಡುವಂತೆ ಒತ್ತಾಯಿಸಿತ್ತು. ಸರ್ವಪಕ್ಷಗಳ ಸಭೆಯಲ್ಲಿ ಕೋವಿಡ್ ಹರಡುವಿಕೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿ ಎಂದು ವಿವಿಧ ಪಕ್ಷದ ನಾಯಕರು ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದರು.

Join Whatsapp