Home ಟಾಪ್ ಸುದ್ದಿಗಳು ಪಾವಗಡ ಬಸ್ ದುರಂತ ಪ್ರಕರಣ: ಮೃತರ ಸಂಖ್ಯೆ 7ಕ್ಕೆ ಏರಿಕೆ

ಪಾವಗಡ ಬಸ್ ದುರಂತ ಪ್ರಕರಣ: ಮೃತರ ಸಂಖ್ಯೆ 7ಕ್ಕೆ ಏರಿಕೆ

ಪಾವಗಡ: ತುಮಕೂರಿನ ಪಾವಗಡದ ಪಳವಳ್ಳಿ ಬಳಿ ನಡೆದ ಖಾಸಗಿ ಬಸ್ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಯುವಕ ಚಿಕಿತ್ಸೆ ಫಲಿಸದೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

19 ವರ್ಷದ ಮಹೇಂದ್ರ ಯುವಕ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.

ಮಾ.19ರಂದು ಪಾವಗಡ ಪಳವಳ್ಳಿ ಕಟ್ಟೆ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಆರು ಮಂದಿ ಮೃತಪಟ್ಟಿದ್ದರೆ, ಹಲವರು ಗಂಭೀರವಾಗಿ ಗಾಯಗೊಂಡಿದ್ದರು.

Join Whatsapp
Exit mobile version