Home ಟಾಪ್ ಸುದ್ದಿಗಳು ಪವಿತ್ರಾಗೌಡಗೆ ಜೈಲೇ ಗತಿ: ಜಾಮೀನು ಅರ್ಜಿ ವಿಚಾರಣೆ ನ.21ಕ್ಕೆ ಮುಂದೂಡಿಕೆ

ಪವಿತ್ರಾಗೌಡಗೆ ಜೈಲೇ ಗತಿ: ಜಾಮೀನು ಅರ್ಜಿ ವಿಚಾರಣೆ ನ.21ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾಗೌಡ ಸೇರಿದಂತೆ ಐವರ ಜಾಮೀನು ಅರ್ಜಿ ವಿಚಾರಣೆಯನ್ನು ನ.21 ಕ್ಕೆ ಹೈಕೋರ್ಟ್ ಮುಂದೂಡಿದೆ.


ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ಗೆ ಆಗಮಿಸಿದ್ದ ಪವಿತ್ರಾಗೌಡ ತಾಯಿ, ಮಗಳಿಗೆ ಜಾಮೀನು ಸಿಗದ ಹಿನ್ನಲೆಯಲ್ಲಿ ಬೇಸರದಿಂದಲೇ ಹೊರನಡೆದರು.


ಕೊಲೆ ಪ್ರಕರಣದಲ್ಲಿ ಎ2 ಆರೋಪಿ ದರ್ಶನ್ ಜಾಮೀನು ಅರ್ಜಿಯೂ 21 ಕ್ಕೆ ವಿಚಾರಣೆಯಲ್ಲಿದೆ. ಸದ್ಯ ಮಧ್ಯಂತರ ಜಾಮೀನು ಪಡೆದು ದರ್ಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Join Whatsapp
Exit mobile version