ಪವಿತ್ರಾ ಜಯರಾಮ್ ಸಾವಿನ ಬೆನ್ನಲ್ಲೇ ಗೆಳೆಯ ಚಂದು ಆತ್ಮಹತ್ಯೆ

Prasthutha|

ಬೆಂಗಳೂರು: ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಮೃತಪಟ್ಟ ಕೆಲವೇ ದಿನಗಳಲ್ಲಿ ಅವರ ಸ್ನೇಹಿತ ನಟ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದು, ತೆಲುಗು ಧಾರವಾಹಿ ರಂಗಕ್ಕೆ ದೊಡ್ಡ ಶಾಕ್ ಕೊಟ್ಟಿದೆ.

- Advertisement -


ಪವಿತ್ರಾ ನಿಧನದ ಬಳಿಕ ತೀವ್ರ ದುಃಖಕ್ಕೆ ಒಳಗಾಗಿದ್ದ ಚಂದು ಅವರು ಹೈದರಾಬಾದ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಕಳೆದ ವಾರ ಪವಿತ್ರಾ ಅವರು ಅಪಘಾತದಲ್ಲಿ ಮೃತಪಟ್ಟಾಗ, ಕಾರಿನಲ್ಲಿ ಚಂದು ಕೂಡ ಇದ್ದರು. ಅವರ ಕೈಗೂ ಕೂಡ ಪೆಟ್ಟಾಗಿತ್ತು. ಮಂಡ್ಯದಲ್ಲಿ ಪವಿತ್ರಾ ಜಯರಾಮ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಚಂದು, ತೀವ್ರ ನೋವಿನಲ್ಲಿದ್ದರು. ಕಳೆದ ಕೆಲವು ದಿನಗಳಿಂದ ತೀವ್ರವಾಗಿ ನೊಂದಿದ್ದ ಅವರು, ಕೊನೆಗೆ ಹೈದರಾಬಾದ್ನ ಮಣಿಕೊಂಡದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Join Whatsapp