Home ಟಾಪ್ ಸುದ್ದಿಗಳು ಬಾಣಂತಿ ನಿಧನ: ಆಸ್ಪತ್ರೆಯ ಎರಡು ಲಕ್ಷ ರೂ. ಬಿಲ್ ಪಾವತಿ ಮಾಡಿದ ಸಚಿವ ಝಮೀರ್ ಅಹಮದ್

ಬಾಣಂತಿ ನಿಧನ: ಆಸ್ಪತ್ರೆಯ ಎರಡು ಲಕ್ಷ ರೂ. ಬಿಲ್ ಪಾವತಿ ಮಾಡಿದ ಸಚಿವ ಝಮೀರ್ ಅಹಮದ್

ಬೆಂಗಳೂರು: ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯ ವೈದ್ಯಕೀಯ ವೆಚ್ಚವನ್ನು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಪಾವತಿ ಮಾಡಿದ್ದಾರೆ.
ಚಿಕ್ಕನಾಯಕನಹಳ್ಳಿ ಹುಳಿಯಾರು ಪಾಳ್ಯದ ಹಣ್ಣಿನ ವ್ಯಾಪಾರಿ ಜಬಿವುಲ್ಲಾ ಎಂಬುವರ ಪತ್ನಿ ಮೂವತ್ತು ವರ್ಷದ ಫಾತಿಮಾಬಿ ಎಂಬುವರು ತಿಪಟೂರು ಆಸ್ಪತ್ರೆಗೆ ದಾಖಲಾಗಿದ್ದರು. ಆ ನಂತರ ಬೆಂಗಳೂರಿಗೆ ಚಿಕಿತ್ಸೆಗೆ ಬಂದಿದ್ದ ಅವರು ಜೆಪಿ ನಗರದ ಕ್ಷೇಮ ಆಸ್ಪತ್ರೆಯಲ್ಲಿ ಕಳೆದ 20 ದಿನಗಳಿಂದಿದ್ದು, ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.


ನಂತರ ಅನಾರೋಗ್ಯ ಕಾಣಿಸಿಕೊಂಡು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದರು. ಮೃತದೇಹ ತೆಗೆದುಕೊಂಡು ಹೋಗಲು 3 ಲಕ್ಷ ರೂ. ಪಾವತಿಸಬೇಕಿತ್ತು. ಪತಿ ಹಣ ಪಾವತಿ ಮಾಡಲು ಆಗದೆ ಸಂಕಷ್ಟ ಎದುರಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಜಮೀರ್ ಅಹಮದ್ ಎರಡು ಲಕ್ಷ ರೂ. ಪಾವತಿ ಮಾಡಿ ಮೃತದೇಹ ಸ್ವಗ್ರಾಮಕ್ಕೆ ತೆಗೆದುಕೊಂಡು ಹೋಗಲು ಆಂಬುಲೆನ್ಸ್ ವ್ಯವಸ್ಥೆ ಮಾಡಿಸಿದರು.

Join Whatsapp
Exit mobile version