ಪೆಗಾಸೆಸ್ ಪ್ರಕರಣ: ಆಗಸ್ಟ್ 5 ರಂದು ಸುಪ್ರೀಮ್ ಕೋರ್ಟ್ ವಿಚಾರಣೆ

Prasthutha|

ಹೊಸದಿಲ್ಲಿ, ಆ.1: ಪೆಗಾಸೆಸ್ ಪ್ರಕರಣದ ತನಿಖೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸರ್ವೋಚ್ಚ ನ್ಯಾಯಾಲಯ ಆಗಸ್ಟ್ 5ರಂದು ವಿಚಾರಣೆ ನಡೆಸಲಿದೆ.

- Advertisement -

ಮುಖ್ಯ ನ್ಯಾಯಮೂರ್ತಿಗಳಾದ ಎನ್ ವಿ ರಮಣ ಮತ್ತು ಸೂರ್ಯ ಕಾಂತ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ವಿಚಾರಣೆ ನಡೆಸಲು ನಿರ್ಧರಿಸಿದೆ.

ರಾಜಕಾರಣಿಗಳು, ಸಾಮಾಜಿಕ ಹೋರಾಟಗಾರರು ಮತ್ತು ಪತ್ರಕರ್ತರನ್ನು ಕಣ್ಗಾವಲಿನಲ್ಲಿಡಲು ಇಸ್ರೇಲಿ ಮೂಲದ ಸಾಫ್ಟ್ ವೇರ್ ಪೆಗಾಸಸ್ ಅನ್ನು ಬಳಸುತ್ತಿದೆ ಎಂಬ ಆರೋಪದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ಕೋರಿ ಈ ಅರ್ಜಿ ಸಲ್ಲಿಕೆಯಾಗಿದ್ದವು.
ಹಿರಿಯ ಪತ್ರಕರ್ತರಾದ ಎನ್ ರಾಮ್ ಮತ್ತು ಶಶಿಕುಮಾರ್, ಕಮ್ಯುನಿಸ್ಟ್ ಮಾರ್ಕ್ಸ್ ವಾದಿ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ) ಯ ರಾಜ್ಯಸಭಾ ಸಂಸದ ಜಾನ್ ಬ್ರಿಟಾಸ್ ಮತ್ತು ವಕೀಲ ಎಂಎಲ್ ಶರ್ಮಾ ಅವರು ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ಆಗಸ್ಟ್ 5 ರಂದು ನ್ಯಾಯಮೂರ್ತಿಗಳಾದ ಎನ್.ವಿ ರಮಣ, ಸೂರ್ಯಕಾಂತ್ ನಡೆಸಲಿದ್ದಾರೆ. ಮಾತ್ರವಲ್ಲದೇ ಪೆಗಾಸೆಸ್ ಸ್ಪೈವೇರ್ ಅನ್ನು ನೇರವಾಗಿ ಅಥವಾ ಪರೋಕ್ಷವಾಗಿ ಕಣ್ಗಾವಲು ನಡೆಸಲು ಬಳಸಿದೆಯೇ ಎಂಬುದನ್ನು ಬಹಿರಂಗಪಡಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.



Join Whatsapp