ನವದೆಹಲಿ: ಪೆಗಾಸೆಸ್ ಕಣ್ಗಾವಲು ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಮ್ ಕೋರ್ಟ್ ನೂತನ ತಾಂತ್ರಿಕ ಸಮಿತಿಯೊಂದನ್ನು ರಚಿಸಿದ್ದು, ಮುಂದಿನ ವಾರದಿಂದ ಸ್ವತಂತ್ರವಾಗಿ ತನಿಖೆ ನಡೆಸಿ ವರದಿ ಒಪ್ಪಿಸುವಂತೆ ಸುಪ್ರೀಮ್ ಕೋರ್ಟ್ ಆದೇಶಿಸಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಅವರು ಪ್ರಕರಣದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡು ವಕೀಲರ ವಾದವನ್ನು ಆಲಿಸಿದರು.
ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸುತ್ತಾ ತಾಂತ್ರಿಕ ಸಮಿತಿಯ ಕೆಲವು ಸದಸ್ಯರ ವೈಯಕ್ತಿಕ ಕಾರಣದಿಂದಾಗಿ ಗೈರುಹಾಜರಾಗಿದ್ದಾರೆ. ಈ ನಿಟ್ಟಿನಲ್ಲಿ ಮುಂದಿನ ವಾರದಿಂದ ಸ್ವತಂತ್ರ ತನಿಖೆಯ ಆದೇಶವನ್ನು ಕಾಯ್ದಿರಿಸಲಾಗುವುದೆಂದು ಅವರು ತಿಳಿಸಿದ್ದಾರೆ.