Home ಟಾಪ್ ಸುದ್ದಿಗಳು ಪೆನ್‌ ಡ್ರೈವ್ ಹಂಚಿಕೆ ಪ್ರಕರಣ: ಚೇತನ್, ಲಿಖಿತ್‌ ಗೌಡಗೆ ಜಾಮೀನು ಮಂಜೂರು

ಪೆನ್‌ ಡ್ರೈವ್ ಹಂಚಿಕೆ ಪ್ರಕರಣ: ಚೇತನ್, ಲಿಖಿತ್‌ ಗೌಡಗೆ ಜಾಮೀನು ಮಂಜೂರು

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ, ಫೋಟೋಗಳಿರುವ ಪೆನ್‌ ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳಾದ ಚೇತನ್ ಹಾಗೂ ಲಿಖಿತ್ ಗೌಡಗೆ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಮಂಜೂರಾಗಿದೆ.

ಪೆನ್‌ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಆರು ಮತ್ತು ಏಳನೇ ಆರೋಪಿಗಳಾಗಿದ್ದ ಮಾಜಿ ಶಾಸಕ ಪ್ರೀತಂಗೌಡ ಅವರ ಆಪ್ತರಾದ ಯಲಗುಂದ ಚೇತನ್ ಹಾಗೂ ಲಿಖಿತ್‌ಗೌಡರನ್ನು ಮೇ 12 ರಂದು ಎಸ್‌ಐಟಿ ತಂಡ ಬಂಧಿಸಿ ವಿಚಾರಣೆ ನಡೆಸಿದ ನಂತರ ನ್ಯಾಯಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಹದಿನೆಂಟು ದಿನಗಳ ಬಳಿಕ ಇಬ್ಬರು ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ.

Join Whatsapp
Exit mobile version