ಪೆನ್ ಡ್ರೈವ್ ಕೇಸ್: ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿದ್ದ ಪ್ರಜ್ವಲ್ ಬಂಧನ

Prasthutha|

ಚಿಕ್ಕಮಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.
ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಬಂಧಿತ ಆರೋಪಿ.

- Advertisement -

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಎಂದು ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್ ನಲ್ಲಿ ಪ್ರಜ್ವಲ್ ಅಪ್ಲೋಡ್ ಮಾಡಿದ್ದನು. ಪ್ರಜ್ವಲ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಐಪಿಸಿ ಸೆಕ್ಷನ್ 67,67 (ಎ) ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪ್ರಜ್ವಲ್ ಟ್ರೋಲ್ ಪೇಜ್ ಅಡ್ಮಿನ್ ಆಗಿದ್ದಾನೆ.

Join Whatsapp