ಅಶ್ಲೀಲ ಪೆನ್ ಡ್ರೈವ್ ಕೇಸ್: ಆ ವಿಡಿಯೋಗಳಲ್ಲಿ ಇರುವುದು ನಾನಲ್ಲ ಎಂದ ಪ್ರಜ್ವಲ್ ರೇವಣ್ಣ

Prasthutha|

ಬೆಂಗಳೂರು: ನೀವು ತೋರಿಸಿರುವ ವಿಡಿಯೋಗಳಲ್ಲಿ ಇರುವುದು ನಾನಲ್ಲ. ಅವರೆಲ್ಲ ನನಗೆ ಪರಿಚಯ ಅಷ್ಟೇ. ನಾನು ಯಾರನ್ನೂ ಅತ್ಯಾಚಾರ ಮಾಡಿಲ್ಲ. ಅತ್ಯಾಚಾರ ಆರೋಪಗಳಿಗೂ ನನಗೂ ಯಾವ ಸಂಬಂಧವೂ ಇಲ್ಲ ಎಂದು SIT ಮುಂದೆ ಪ್ರಜ್ವಲ್ ರೇವಣ್ಣ ಮಾಹಿತಿ ನೀಡಿದ್ದಾರೆ.

- Advertisement -


ತಮ್ಮ ಮೊಬೈಲ್ ಒಂದು ವರ್ಷದ ಹಿಂದೆಯೇ ಕಳೆದುಹೋಗಿದ್ದು, ಆ ಕುರಿತು ಹೊಳೆನರಸೀಪುರ ಠಾಣೆಯಲ್ಲಿ ಮೊಬೈಲ್ ಕಳ್ಳತನದ ಬಗ್ಗೆ ದೂರು ನೀಡಿರುವುದಾಗಿಯೂ ಹೇಳಿದ್ದಾರೆ.
ಪ್ರಜ್ವಲ್ ಅವರ ವಿಚಾರಣೆ ಮಾಡಿ 161 ಹೇಳಿಕೆಯನ್ನು ಎಸ್ ಐಟಿ ದಾಖಲಿಸಿದೆ. ಅದರಲ್ಲಿ ಮೊಬೈಲ್ ಕುರಿತು ದಾಖಲಿಸಿದೆ. ನೀವು ಹೇಳುತ್ತಿರುವ ಮೊಬೈಲ್ ನನ್ನ ಬಳಿ ಇಲ್ಲ. ಕಳೆದ ವರ್ಷವೇ ಫೋನ್ ಕಳೆದು ಹೋಗಿದ್ದು, ಆ ಬಗ್ಗೆ ಹೊಳೆನರಸೀಪುರ ಠಾಣೆಯಲ್ಲಿ ದೂರು ಕೂಡ ನೀಡಿದ್ದೇನೆ ಎಂದು ಪ್ರಜ್ವಲ್ ಹೇಳಿದ್ದಾರೆ. ಈ ಹೇಳಿಕೆ ಸತ್ಯಾಸತ್ಯತೆಯನ್ನು ಎಸ್ ಐಟಿ ಪರಿಶೀಲಿಸಲಿದೆ.


ನೀವು ತೋರಿಸಿರುವ ವಿಡಿಯೋಗಳಲ್ಲಿ ಇರುವುದು ನಾನಲ್ಲ. ಅವರೆಲ್ಲ ನನಗೆ ಪರಿಚಯ ಅಷ್ಟೇ. ನಾನು ಯಾರನ್ನೂ ಅತ್ಯಾಚಾರ ಮಾಡಿಲ್ಲ. ಅತ್ಯಾಚಾರ ಆರೋಪಗಳಿಗೂ ನನಗೂ ಯಾವ ಸಂಬಂಧವೂ ಇಲ್ಲ. ವಿಡಿಯೋಗಳ ಬಗ್ಗೆ ನಂಗಷ್ಟು ಗೊತ್ತಿಲ್ಲ ಎಂದು ಪ್ರಜ್ವಲ್ ಹೇಳಿದ್ದಾರೆ. ವೈರಲ್ ಆಗಿರುವ ವಿಡಿಯೋಗಳನ್ನು ತೋರಿಸಿ ಪ್ರಶ್ನಿಸಿದಾಗ ಈ ಉತ್ತರ ದೊರೆತಿದೆ. ತನ್ನ ಮೇಲಿರುವ ಎಲ್ಲ ಆರೋಪಗಳನ್ನು ಪ್ರಜ್ವಲ್ ತಳ್ಳಿ ಹಾಕಿದ್ದಾರೆ



Join Whatsapp