ಪೆನ್ ಡ್ರೈವ್ ಪ್ರದರ್ಶನ: ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

Prasthutha|

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹಲವು ಇಲಾಖೆಗಳಲ್ಲಿ ಕಮಿಷನ್ ಪಡೆಯುತ್ತಿರುವ ಬಗ್ಗೆ ಆರೋಪಿಸಿ, ಈ ಕುರಿತು ಪೆನ್ ಡ್ರೈವ್ ನನ್ನ ಬಳಿ ಇದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದರು. ಆದರೆ, ಇಲ್ಲಿಯವರೆಗೂ ಯಾವುದೇ ಮಾಹಿತಿಯನ್ನು ನೀಡದ ಹಿನ್ನಲೆ ವಕೀಲ ಅಮೃತೇಶ್ ಎಂಬುವವರು ಹೆಚ್ ಡಿಕೆ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

- Advertisement -


ಪೆನ್ ಡ್ರೈವ್ ತೋರಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಲೀಗಲ್ ನೋಟಿಸ್ ನೀಡಲಾಗಿತ್ತು. ಆದರೆ, ಇದ್ಯಾವುದಕ್ಕೂ ಉತ್ತರ ಬಂದಿಲ್ಲ. ಪೆನ್ ಡ್ರೈವ್ ನ್ನ ಸ್ಪೀಕರ್ಗೆ ಅಥವಾ ಪೊಲೀಸರಿಗೆ ಆಗಲಿ ಇನ್ನೂ ನೀಡಿಲ್ಲ. ಕುಮಾರಸ್ವಾಮಿ ಅವರು ಎರಡು ಬಾರಿ ಸಿಎಂ ಆಗಿದ್ದವರು. ಈ ರೀತಿ ಮಾಡಿರುವುದು ಸರಿಯಲ್ಲ. ಕುಮಾರಸ್ವಾಮಿಯವರ ಬಳಿ ಇರುವ ಪೆನ್ ಡ್ರೈವ್ ಸೀಜ್ ಮಾಡಬೇಕು ಮತ್ತು ಅವರ ವಿರುದ್ಧ ಕ್ರಮತೆಗದುಕೊಳ್ಳುವಂತೆ ವಕೀಲ ಅಮೃತೇಶ್ ಅವರಿಂದ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.

Join Whatsapp