ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಸೇರಿದ್ದಕ್ಕೆ ಜನ ನನ್ನ ಸೋಲಿಸಿಬಿಟ್ಟರು: ಎಂಟಿಬಿ ನಾಗರಾಜ್

Prasthutha|

ಚಿಕ್ಕಬಳ್ಳಾಪುರ: ಉಪಚುನಾವಣೆ ವೇಳೆ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಸೇರಿದ್ದಕ್ಕೆ ಜನ ನನ್ನನ್ನು ಸೋಲಿಸಿಬಿಟ್ಟರು ಎಂದು ಪೌರಾಡಳಿತ ಇಲಾಖೆ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.

- Advertisement -

ಚಿಕ್ಕಬಳ್ಳಾಪುರದ ಜರಬಂಡಹಳ್ಳಿ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೊನ್ನೆ ನಡೆದ ಬೈ ಎಲೆಕ್ಷನ್ ನಲ್ಲಿ ನಾನು ಸೋಲಬೇಕಿತ್ತಾ? ಆದರೆ ಸೋಲಿಸಿಬಿಟ್ಟಿದ್ದೀರಾ ಎಂದು ಬೇಸರ ವ್ಯಕ್ತಪಡಿಸಿದರು.

ಸುಧಾಕರ್ ಜೊತೆಗೆ ನಾನು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದಿದ್ದಕ್ಕೆ ಸೋಲಿಸಿಬಿಟ್ಟಿದ್ದೀರಾ. ಆದರೆ ಸುಧಾಕರ್’ರನ್ನು ಗೆಲ್ಲಿಸಿದ್ದೀರಾ. ಇದೇ ನನಗೆ ನೋವು ತರಿಸಿದೆ ಎಂದು ಮತದಾರರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Join Whatsapp