ವಿಶಾಖಪಟ್ಟಣ: ಆಂಧ್ರಪ್ರದೇಶದ ನಾಲ್ಕು ಜಿಲ್ಲೆಗಳಲ್ಲಿ 20 ಸೆಂ.ಮೀ.ವರೆಗೆ ಭಾರಿ ಮಳೆಯಾಗಿದ್ದು, ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
100 ಅಧಿಕ ಜನರು ನಾಪತ್ತೆಯಾಗಿದ್ದು, ಭಾರತೀಯ ವಾಯುಪಡೆ, SDRF ಮತ್ತು ಅಗ್ನಿಶಾಮಕ ಸಿಬ್ಬಂದಿ ಮಿಂಚಿನ ಕಾರ್ಯಾಚರಣೆಯಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ಹಲವಾರು ಜನರನ್ನು ರಕ್ಷಿಸಿದ್ದಾರೆ.
ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪರಿಸ್ಥಿತಿಯ ಬಗ್ಗೆ ವಿಚಾರಿಸಿ ರಾಜ್ಯಕ್ಕೆ ಅಗತ್ಯ ನೆರವಿನ ಭರವಸೆ ನೀಡಿದ್ದಾರೆ.
ಮುಖ್ಯಮಂತ್ರಿಗಳು ಇಂದು(ಶನಿವಾರ) ಪ್ರವಾಹ ಪೀಡಿತ ಜಿಲ್ಲೆಗಳ ವೈಮಾನಿಕ ಸಮೀಕ್ಷೆ ಕೈಗೊಳ್ಳಲಿದ್ದಾರೆ ಎಂದು ಮುಖ್ಯ ಮಂತ್ರಿ ಕಚೇರಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.