RSS ಬಗ್ಗೆ ಜನರಿಗೆ ಎಲ್ಲವೂ ತಿಳಿದಿದೆ: ಮುಖ್ಯಮಂತ್ರಿ ಬೊಮ್ಮಾಯಿ

Prasthutha|

ಹುಬ್ಬಳ್ಳಿ: RSS ಸಂಘಟನೆ ಯ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಆದರೆ ಜನರಿಗೆ RSS ಬಗ್ಗೆ ಎಲ್ಲವೂ ತಿಳಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ, ಆರ್ ಎಸ್ ಎಸ್ ಸಂಘಟನೆ 75 ವರ್ಷಗಳಿಂದ ದೇಶಭಕ್ತಿ ಹಾಗೂ ಜನರ ಸೇವೆಯಲ್ಲಿ ತೊಡಗಿದೆ ಎಂದು ಹೇಳಿದ್ದಾರೆ.

- Advertisement -

ಹಲವಾರು ಸಂದರ್ಭಗಳಲ್ಲಿ ಅನಾಹುತಗಳಾದಾಗ ಜನರ ಸಂಕಷ್ಟಕ್ಕೆ ಸ್ಪಂದಿಸಲು ಅವರ ಪರವಾಗಿ ಆರೆಸ್ಸೆಸ್ ನಿಂತಿದೆ. ವಿವಿಧ ರಾಜ್ಯಗಳಲ್ಲಿ ಆರೆಸ್ಸೆಸ್ ಉತ್ತಮವಾಗಿ ಕೆಲಸ ಮಾಡಿದೆ. ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷ ಆರೆಸ್ಸೆಸ್ ವಿರೋಧಿಗಳು. ಅವರ ಇಂತಹ ಧೋರಣೆಯಿಂದ ಎಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದ್ದು, ಕರ್ನಾಟಕದಲ್ಲಿಯೂ ಹೀಗೆ ಆಗಲಿದೆ ಎಂದಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿಯೂ ರಾಜಕೀಯ ಮಾಡುತ್ತಿದ್ದು, ಶಿಕ್ಷಣ ಸಚಿವರು ಇದಕ್ಕೆ ಉತ್ತರ ನೀಡಲಿದ್ದಾರೆ ಎಂದು ಹೇಳಿದ್ದಾರೆ.

Join Whatsapp