ಚೈತ್ರಾ ಕುಂದಾಪುರ ಅಂತಹ ಜನರು ಎಲ್ಲಾ ಪಕ್ಷದಲ್ಲೂ ಇರುತ್ತಾರೆ: ಅರವಿಂದ ಬೆಲ್ಲದ್

Prasthutha|

ಹುಬ್ಬಳ್ಳಿ: ಬಿಜೆಪಿ ಟಿಕೆಟ್ ಕೊಡುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಮತ್ತು ಇತರ ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ.

- Advertisement -

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್, ಚೈತ್ರಾ ಕುಂದಾಪುರ ಅಂತಹ ಜನರು ಎಲ್ಲಾ ಪಕ್ಷದಲ್ಲೂ ಇರುತ್ತಾರೆ ಎಂದು ಹೇಳಿದ್ದಾರೆ.
ದುಡ್ಡು ಮಾಡೋದು, ಜನರಿಗೆ ಮೋಸ ಮಾಡೋದು ಅವರ ಕೆಲಸ. ಇದು ಮೊದಲನೇ ಘಟನೆ ಅಲ್ಲ. ಮೋಸ ಹೋಗುವವರು ಇರುವವರೆಗೂ ಇದು ಕೊನೆ ಆಗಲ್ಲ. ಈ ಬಗ್ಗೆ ನಮ್ಮ ಪಕ್ಷ ಮೊದಲೇ ತಿಳಿಸಿತ್ತು ಎಂದರು.


ಎಲ್ಲಲ್ಲೊ ದುಡ್ಡು ಮಾಡಿದವರು, ಹೇಗೆ ರಾಜಕೀಯ ಮಾಡಬೇಕು ಅಂತ ಗೊತ್ತಿಲ್ಲದವರು ಈ ರೀತಿ ಮೋಸ ಹೋಗುತ್ತಾರೆ. ಇಂತಹ ಡಮ್ಮಿ ವ್ಯಕ್ತಿಗಳ ಜೊತೆಗೆ ಮೋಸ ಹೋಗತ್ತಾರೆ. ಚೈತ್ರಾ ಕುಂದಾಪುರ ಬಿಜೆಪಿ ಪಕ್ಷದವರಲ್ಲಾ ಪಕ್ಷದ ಸಿದ್ಧಾಂತದ ಬಗ್ಗೆ ಮಾತನಾಡಿ ತಕ್ಷಣ ಬಿಜೆಪಿಯವರಾಗಲ್ಲ. ಇವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದರು.