ಅಮರಾವತಿ: ದಕ್ಷಿಣ ಭಾರತ ರಾಜ್ಯಗಳ ಜನರು ಹೆಚ್ಚಿನ ಮಕ್ಕಳನ್ನು ಹೊಂದಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಕರೆ ನೀಡಿದ್ದಾರೆ.
ವಯಸ್ಸಾದವರ ಸಂಖ್ಯೆ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿಎಂ, ಹೆಚ್ಚಿನ ಮಕ್ಕಳಿರುವ ಕುಟುಂಬಗಳನ್ನು ಪ್ರೋತ್ಸಾಹಿಸಲು ಹೊಸ ಕಾನೂನನ್ನು ಜಾರಿಗೊಳಿಸಲಾಗುವುದು. ಜನಸಂಖ್ಯೆ ನಿರ್ವಹಣೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಯೋಜಿಸುತ್ತಿದೆ ಎಂದು ಹೇಳಿದ್ದಾರೆ.
ಎರಡಕ್ಕಿಂತ ಹೆಚ್ಚು ಮಕ್ಕಳಿರುವವರು ಮಾತ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹರಾಗುವ ಕಾನೂನು ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ನಾಯ್ಡು ತಿಳಿಸಿದ್ದಾರೆ.