ದೇಶದ ಜನರು ಸುಳ್ಳು, ದ್ವೇಷ ಮತ್ತು ಅಪಪ್ರಚಾರವನ್ನು ತಿರಸ್ಕರಿಸಿದ್ದಾರೆ: ರಾಹುಲ್ ಗಾಂಧಿ

Prasthutha|

ನವದೆಹಲಿ: ಮೊದಲ ಐದು ಹಂತದ ಮತದಾನದಲ್ಲಿ ದೇಶದ ಜನರು ಸುಳ್ಳು, ದ್ವೇಷ ಮತ್ತು ಅಪಪ್ರಚಾರವನ್ನು ತಿರಸ್ಕರಿಸಿದ್ದಾರೆ. ಬದುಕಿಗೆ ಸಂಬಂಧಿಸಿದ ತಳಮಟ್ಟದ ನೈಜ ಸಮಸ್ಯೆಗಳಿಗೆ ಆದತ್ಯೆ ನೀಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

- Advertisement -

ಲೋಕಸಭೆಗೆ ನಡೆಯುತ್ತಿರುವ ಆರನೇ ಹಂತದ ಮತದಾನದ ವೇಳೆ ನವದೆಹಲಿಯ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ರಾಹುಲ್ ಗಾಂಧಿ ಮತ ಚಲಾಯಿಸಿದ್ದಾರೆ. ಈ ವೇಳೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಅರ್ಹ ಮತದಾರರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದ್ದಾರೆ.

Join Whatsapp