ಮೈಸೂರು: ಪಕ್ಷದ ಹಿತದೃಷ್ಟಿಯಿಂದ ನಿಖಿಲ್ ಸ್ಪರ್ಧಿಸಲು ಬಯಸಿದ್ದಾರೆ. ಹೀಗಾಗಿ ನಿಖಿಲ್ ಗೆಲುವಿಗಾಗಿ ಪೀಠಾಧಿಪತಿಗಳು ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ. ಎಂದು ಚಾಮುಂಡಿ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಕುಮಾರಸ್ವಾಮಿ ಅವರು ಹೇಳಿದರು.
ಇದೇ ವೇಳೆ ತಮ್ಮ ಭಾವನಾತ್ಮಕ ಭಾಷಣವನ್ನು ಟೀಕಿಸಿದ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಜನರ ಕಷ್ಟವನ್ನು ಕಂಡು ಕಣ್ಣೀರು ಬಂದಿತು. ಚುನಾವಣೆ ಸಂದರ್ಭದಲ್ಲಿ ಅನುಕಂಪ ಗಿಟ್ಟಿಸಿಕೊಳ್ಳಲು ನಾನು ಅಳಲಿಲ್ಲ, ಅನುಕಂಪ ಇಲ್ಲದ ಕೆಲ ಕಟುಕರು ಅಳುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
5 ಗ್ಯಾರಂಟಿ ಯೋಜನೆಗಳ ಮರುಪರಿಶೀಲನೆ ಕುರಿತ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಜಿ ಪರಮೇಶ್ವರ ಅವರು ಈ ಬಗ್ಗೆ ಮಾತನಾಡಿದ್ದು ಮುಂದಿನ ಮೂರು ವರ್ಷಗಳವರೆಗೆ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ. ಆದರೆ, ಸರ್ಕಾರ ದಿವಾಳಿಯಾಗುತ್ತಿದೆ ಎಂಬ ಮಾತುಗಳೂ ಕೇಳಿ ಬರುತ್ತಿವೆ ಎಂದರು.
ರಾಜ್ಯವನ್ನು ದಿವಾಳಿಯಾಗಲು ಜನರು ಬಿಡುವುದಿಲ್ಲ ಎಂಬ ವಿಶ್ವಾಸ ನನಗಿದೆ. ಅಭಿವೃದ್ಧಿ ಕಾರ್ಯಗಳು ಮತ್ತು ಗ್ಯಾರಂಟಿ ಯೋಜನೆಗಳೆರಡನ್ನೂ ಕೇಂದ್ರೀಕರಿಸಬಲ್ಲ ವಿಷಯಗಳ ಕುರಿತು ಕಾಂಗ್ರೆಸ್ ಪಕ್ಷಕ್ಕೆ ಆಸಕ್ತಿ ಇಲ್ಲ ಎಂದು ಹೇಳಿದರು.
ಮುಡಾ ಮತ್ತು ವಕ್ಫ್ ವಿವಾದ ಎರಡನ್ನೂ ಮುಚ್ಚಿಹಾಕಲು ಕಾಂಗ್ರೆಸ್ ತಪ್ಪುಗಳ ಮೇಲೆ ತಪ್ಪುಗಳನ್ನು ಮಾಡುತ್ತಿದೆ ಆದರೆ, ಈ ವಿವಾದಗಳು ಉಪಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.