ಬಿಜೆಪಿ ಸರ್ಕಾರವನ್ನು ಕಿತ್ತೊಗೆದಾಗಲೇ ಜನರಿಗೆ ನೆಮ್ಮದಿ: ಅಖಿಲೇಶ್ ಯಾದವ್

Prasthutha|

ಕನೌಜ್‌ (ಉತ್ತರ ಪ್ರದೇಶ): ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವನ್ನು ಕಿತ್ತೊಗೆದಾಗ ಮಾತ್ರವೇ ಜನರಿಗೆ ನೆಮ್ಮದಿ ಸಿಗುತ್ತದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌ ಹೇಳಿದ್ದಾರೆ.

- Advertisement -

ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅಖಿಲೇಶ್‌, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಂದಾಗುವಂತೆ ಎಲ್ಲ ಪಕ್ಷಗಳನ್ನು ಕೇಳುತ್ತೇನೆ. ಉತ್ತರ ಪ್ರದೇಶದ ಎಲ್ಲ 80 ಕ್ಷೇತ್ರಗಳಲ್ಲಿಯೂ ಬಿಜೆಪಿಯನ್ನು ಸೋಲಿಸಲು ಪ್ರಯತ್ನಿಸಲಾಗುವುದು. ಬಿಜೆಪಿಯನ್ನು ಅಧಿಕಾರದಿಂದ ಕಿತ್ತು ಹಾಕಿದಾಗಲೇ ಜನರು ನೆಮ್ಮದಿ ಅನುಭವಿಸುವುದು ಎಂದು ಹೇಳಿದ್ದಾರೆ.

ವಿರೋಧ ಪಕ್ಷಗಳ ಒಗ್ಗಟ್ಟಿನ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಇತ್ತೀಚೆಗೆ ಮುಕ್ತಾಯವಾದ ಪಂಚ ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ವಿರೋಧ ಪಕ್ಷಗಳ ‘INDIA’ ಒಕ್ಕೂಟದ ಒಗ್ಗಟ್ಟು ಬಲಗೊಂಡಿದೆ ಎಂದು ಹೇದ್ದಾರೆ.



Join Whatsapp