ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮದ್, ಕೃಷ್ಣಬೈರೇಗೌಡ ವಿಮಾನ ಪ್ರಯಾಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕಿಸಿದ್ದಾರೆ.
ಈ ಸಂಬಂಧ ಎಕ್ಸ್ ಮಾಡಿರುವ ಅವರು, ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ, ಜನರ ದುಡ್ಡು ಆಕಾಶದಲ್ಲಿ ಜಾತ್ರೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ, ರೈತರು ಆತ್ಮ ಹತ್ಯೆಗೆ ಶರಣಾಗುತ್ತಿದ್ದಾರೆ, ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ. ಇಂತಹ ಗಭೀರ ಪರಿಸ್ಥಿತಿಯಲ್ಲೂ ಶ್ರೀಮಂತಿಕೆಯ ದರ್ಪ ತೋರುವ, ಮೋಜು, ಮಸ್ತಿಯೇ ತನ್ನ ಜೀವನ ಶೈಲಿ ಎಂದು ಪ್ರದರ್ಶಿಸಿಕೊಳ್ಳುತ್ತಿರುವ ಸಚಿವ ಜಮೀರ್ ಅವರ ಜೊತೆ ಜನರ ತೆರಿಗೆ ಹಣ ವ್ಯಯಿಸಿ ಐಷಾರಾಮಿ ಜೆಟ್ ವಿಮಾನದಲ್ಲಿ ಪ್ರಯಾಣಿಸಿರುವುದು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೋಜಿನ ಭಾಗವಾಗಿರುವುದು ಈ ರಾಜ್ಯದ ದೌರ್ಭಾಗ್ಯವಲ್ಲದೇ ಮತ್ತಿನ್ನೇನು ಅಲ್ಲ ಎಂದಿದ್ದಾರೆ.
ಮುಖ್ಯಮಂತ್ರಿ ಮತ್ತವರ ಮಂತ್ರಿಮಂಡಲದ ಸದಸ್ಯರ ಆಡಂಬರ, ವೈಭವದ ಪ್ರದರ್ಶನ ಗಳನ್ನು ನೋಡಿದರೆ “ರೋಮ್ ದೊರೆ ನೀರೋ” ಉಲ್ಲೇಖಿಸುವ ಬದಲು “ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ?.” ಎಂದು ವರ್ಣಿಸಬಹುದಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.
"ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ
— Vijayendra Yediyurappa (@BYVijayendra) December 22, 2023
ಜನರ ದುಡ್ಡು ಆಕಾಶದಲ್ಲಿ ಜಾತ್ರೆ".
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ, ರೈತರು ಆತ್ಮ ಹತ್ಯೆಗೆ ಶರಣಾಗುತ್ತಿದ್ದಾರೆ, ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ, ಇಂಥಾ ಗಭೀರ ಪರಿಸ್ಥಿತಿಯಲ್ಲೂ ಶ್ರೀಮಂತಿಕೆಯ ದರ್ಪ ತೋರುವ, ಮೋಜು, ಮಸ್ತಿಯೇ ತನ್ನ ಜೀವನ ಶೈಲಿ ಎಂದು… pic.twitter.com/Bx5VLq1hsB