Home ಟಾಪ್ ಸುದ್ದಿಗಳು ಶೇ. 6.5ರ ಬಡ್ಡಿದರ ಮುಂದುವರಿಸಲು RBI ನಿರ್ಧಾರ

ಶೇ. 6.5ರ ಬಡ್ಡಿದರ ಮುಂದುವರಿಸಲು RBI ನಿರ್ಧಾರ

A police officer stands guard in front of the Reserve Bank of India (RBI) head office in Mumbai April 17, 2012. The Reserve Bank of India cut interest rates on Tuesday for the first time in three years by an unexpectedly sharp 50 basis points to give a boost to flagging economic growth but warned that there is limited scope for further rate cuts. REUTERS/Vivek Prakash (INDIA - Tags: BUSINESS)

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆಯಂತೆ ರಿಪೋ ದರ ಅಥವಾ ಬಡ್ಡಿದರವನ್ನು ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ.


ಹಣದುಬ್ಬರ ಇನ್ನೂ ಅಧಿಕ ಮಟ್ಟದಲ್ಲಿ ಇರುವುದರಿಂದ ಬಡ್ಡಿ ಇಳಿಕೆ ಸದ್ಯಕ್ಕೆ ಬೇಡ ಎಂಬುದು ಮಾನಿಟರಿ ಪಾಲಿಸಿ ಕಮಿಟಿಯ ಹೆಚ್ಚಿನ ಸದಸ್ಯರ ಅಭಿಮತ. ಮೊನ್ನೆಯಿಂದ ನಡೆದ ಎಂಪಿಸಿ ಸಭೆಯಲ್ಲಿ ವಿವಿಧ ಸಂಗತಿಗಳ ಚರ್ಚೆ ನಡೆದಿದೆ.


ಇಂದು ಪತ್ರಿಕಾಗೋಷ್ಠಿಯಲ್ಲಿ RBI ಗವರ್ನರ್ ಶಕ್ತಿಕಾಂತ ದಾಸ್ ಅವರು ಮಾತನಾಡುತ್ತಾ, ಬಡ್ಡಿ ದರ ಯಥಾಸ್ಥಿತಿಯಲ್ಲಿ ಮುಂದುವರಿಸಲಾಗುತ್ತಿರುವುದನ್ನು ತಿಳಿಸಿದರು. ಎಂಪಿಸಿ ಸಭೆಯಲ್ಲಿ ಆರು ಸದಸ್ಯರಲ್ಲಿ ನಾಲ್ವರು ಬಡ್ಡಿದರ ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸಿದರು ಎಂದು ಹೇಳಿದರು.

ಜಿಡಿಪಿ ಉತ್ತಮವಾಗಿ ಬೆಳವಣಿಗೆ ಹೊಂದುತ್ತಿರುವುದರಿಂದ ಈಗ ಹಣದುಬ್ಬರವನ್ನು ಶೇ. 4ಕ್ಕೆ ತರುವ ನಿಟ್ಟಿನಲ್ಲಿ ಗಮನ ಹರಿಸುವುದು ಮುಖ್ಯ. ಹೀಗಾಗಿ, ಬಡ್ಡಿದರವನ್ನು ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದ್ದಾಗಿ ಶಕ್ತಿಕಾಂತ್ ದಾಸ್ ತಿಳಿಸಿದರು. ರಿವರ್ಸ್ ರಿಪೋ ದರವನ್ನೂ ಶೇ. 3.35ರಲ್ಲಿ ಮುಂದುವರಿಸಲಾಗಿದೆ. ಇಲ್ಲಿ ರಿಪೋ ದರ ಎಂದರೆ ಬ್ಯಾಂಕುಗಳು ಆರ್​ಬಿಐನಿಂದ ಪಡೆಯುವ ಫಂಡ್ ​ಗೆ ನೀಡಬೇಕಾದ ಬಡ್ಡಿದರವಾಗಿದೆ. ರಿವರ್ಸ್ ರಿಪೋ ಎಂಬುದು ಬ್ಯಾಂಕುಗಳು ಆರ್​ ಬಿಐನಲ್ಲಿ ಇಡುವ ಠೇವಣಿಗೆ ಸಿಗುವ ಬಡ್ಡಿದರವಾಗಿದೆ.

Join Whatsapp
Exit mobile version