ಗುತ್ತಿಗೆದಾರರ ಶೇ. 60 ರಿಂದ 70ರಷ್ಟು ಬಿಲ್ ಗಳ ಪಾವತಿಗೆ ಆದೇಶ ಮಾಡಿದ್ದೇವೆ: ಡಿಸಿಎಂ

Prasthutha|

ಬೆಂಗಳೂರು: ಗುತ್ತಿಗೆದಾರರ ಶೇಕಡಾ 60ರಿಂದ 70ರಷ್ಟು ಬಿಲ್ ಬಿಡುಗಡೆಗೆ ಆದೇಶ ಮಾಡಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ತನಿಖೆ ಪೆಂಡಿಂಗ್ ಇದ್ದರೂ ಬಿಲ್​ ಬಿಡುಗಡೆಗೆ ಆದೇಶ ಮಾಡಿದ್ದೇವೆ. ಗುತ್ತಿಗೆದಾರರಿಗೆ ಸಹಾಯ ಆಗಬೇಕು ಎಂದು ಆದೇಶ ನೀಡಿದ್ದೇವೆ. ಹಿರಿತನ ಆಧಾರದ ಮೇಲೆ ಬಿಲ್ ಬಿಡುಗಡೆ ಮಾಡಿದ್ದೇವೆ ಎಂದಿದ್ದಾರೆ.

- Advertisement -

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗಾಬರಿಪಡುವ ಅಗತ್ಯವಿಲ್ಲ. ಗುತ್ತಿಗೆದಾರರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿಚಾರಣೆ ಬಾಕಿ ಇದ್ದರೂ ಶೇಕಡಾ.60-70ರಷ್ಟು ಬಿಲ್ ಇತ್ತು. ಅದನ್ನೆಲ್ಲಾ ರಿಲೀಸ್ ಮಾಡಿದ್ದೀವಿ. ಆದ್ಯತೆ ಮೇಲೆ ಬಿಲ್ ಕೊಟ್ಟಿದ್ದೇವೆ. ಕೆಂಪಣ್ಣ ಅವರು ಭಯಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

- Advertisement -

ಏನೇ ಸಮಸ್ಯೆ ಇದ್ದರೂ ಬಂದು ಹೇಳಲಿ, ಬಗೆಹರಿಸುತ್ತೇವೆ ಎಂದು ಡಿಕೆಶಿ ಭರವಸೆ ನೀಡಿದರು.

ಲೋಕೋಪಯೋಗಿ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಸೇರಿದಂತೆ ಹಲವು ಇಲಾಖೆಗಳಿಂದ ಬಾಕಿ ಬರಬೇಕಿದೆ ಎಂದು ಇಂದು ಸುದ್ದಿಗೋಷ್ಠಿಯಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಿಸಿದ್ದರು.

Join Whatsapp