ಅಪರಾಧ, ಅಪರಾಧಿಗಳೊಂದಿಗೆ ರಾಜಿ ಇಲ್ಲದೆ ಕರ್ತವ್ಯ ನಿರ್ವಹಿಸಿ: ಪೊಲೀಸರಿಗೆ ಬೊಮ್ಮಾಯಿ ಕಿವಿಮಾತು

Prasthutha|

ಬೆಂಗಳೂರು: ಅಪರಾಧ, ಅಪರಾಧಿಗಳೊಂದಿಗೆ ರಾಜಿ ಇಲ್ಲದೆ ಕರ್ತವ್ಯ ನಿರ್ವಹಿಸಿ ಎಂದು  ಪೊಲೀಸರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಿವಿಮಾತು ಹೇಳಿದ್ದಾರೆ. ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೊಲೀಸರ ನಿಷ್ಠೆ, ದಕ್ಷತೆಯಿಂದ ಪ್ರಗತಿಪರ ಸಮಾಜ , ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಿಸಲು ಸಾಧ್ಯವಿದೆ. ಅಪರಾಧ, ಅಪರಾಧಿಗಳೊಂದಿಗೆ ರಾಜಿಯಿಲ್ಲದೆ ಕೆಲಸ ಮಾಡಿದರೆ ಅಪರಾಧ ಕಡಿಮೆಯಾಗುತ್ತದೆ ಎಂದರು.

- Advertisement -

ನಿಮ್ಮ ಸೇವೆಗಳ ಬಗ್ಗೆ ನಮ್ಮ ಸರಕಾರಕ್ಕೆ ಹೆಮ್ಮೆ ಇದೆ, ದೇಶದಲ್ಲಿಯೇ ಕರ್ನಾಟಕ ಪೊಲೀಸ್ ನಂಬರ್ ಒಂದು ಸ್ಥಾನಕ್ಕೆ ಏರಲಿ ಎಂದರು. ಪೊಲೀಸ್ ಕಲ್ಯಾಣ ನಿಧಿಗೆ 5 ಕೋಟಿ ರೂ.ಗಳನ್ನು ಮಂಜೂರು ಮಾಡುವುದಾಗಿ ಇದೇ ಸಂದರ್ಭ ಮುಖ್ಯಮಂತ್ರಿ ಘೋಷಿಸಿದರು.

- Advertisement -

ಇಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಕಾಪಾಡುವುದು ಪೊಲೀಸ್ ಇಲಾಖೆಯ ಪ್ರಮುಖ ಕರ್ತವ್ಯ. ಇಲಾಖೆಯಲ್ಲಿ ಶಿಸ್ತು, ದಕ್ಷತೆ, ನಿಷ್ಠೆ ಬಹಳ ಮುಖ್ಯ, ಈ ಎಲ್ಲಾ ಕಾರ್ಯಗಳಲ್ಲಿ ಕರ್ನಾಟಕ ಪೊಲೀಸ್ ದೇಶದಲ್ಲಿಯೇ ಉನ್ನತ ಸ್ಥಾನದಲ್ಲಿದೆ ಎಂದರು.



Join Whatsapp