Home ಟಾಪ್ ಸುದ್ದಿಗಳು ಅಪರಾಧ, ಅಪರಾಧಿಗಳೊಂದಿಗೆ ರಾಜಿ ಇಲ್ಲದೆ ಕರ್ತವ್ಯ ನಿರ್ವಹಿಸಿ: ಪೊಲೀಸರಿಗೆ ಬೊಮ್ಮಾಯಿ ಕಿವಿಮಾತು

ಅಪರಾಧ, ಅಪರಾಧಿಗಳೊಂದಿಗೆ ರಾಜಿ ಇಲ್ಲದೆ ಕರ್ತವ್ಯ ನಿರ್ವಹಿಸಿ: ಪೊಲೀಸರಿಗೆ ಬೊಮ್ಮಾಯಿ ಕಿವಿಮಾತು

ಬೆಂಗಳೂರು: ಅಪರಾಧ, ಅಪರಾಧಿಗಳೊಂದಿಗೆ ರಾಜಿ ಇಲ್ಲದೆ ಕರ್ತವ್ಯ ನಿರ್ವಹಿಸಿ ಎಂದು  ಪೊಲೀಸರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಿವಿಮಾತು ಹೇಳಿದ್ದಾರೆ. ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೊಲೀಸರ ನಿಷ್ಠೆ, ದಕ್ಷತೆಯಿಂದ ಪ್ರಗತಿಪರ ಸಮಾಜ , ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಿಸಲು ಸಾಧ್ಯವಿದೆ. ಅಪರಾಧ, ಅಪರಾಧಿಗಳೊಂದಿಗೆ ರಾಜಿಯಿಲ್ಲದೆ ಕೆಲಸ ಮಾಡಿದರೆ ಅಪರಾಧ ಕಡಿಮೆಯಾಗುತ್ತದೆ ಎಂದರು.

ನಿಮ್ಮ ಸೇವೆಗಳ ಬಗ್ಗೆ ನಮ್ಮ ಸರಕಾರಕ್ಕೆ ಹೆಮ್ಮೆ ಇದೆ, ದೇಶದಲ್ಲಿಯೇ ಕರ್ನಾಟಕ ಪೊಲೀಸ್ ನಂಬರ್ ಒಂದು ಸ್ಥಾನಕ್ಕೆ ಏರಲಿ ಎಂದರು. ಪೊಲೀಸ್ ಕಲ್ಯಾಣ ನಿಧಿಗೆ 5 ಕೋಟಿ ರೂ.ಗಳನ್ನು ಮಂಜೂರು ಮಾಡುವುದಾಗಿ ಇದೇ ಸಂದರ್ಭ ಮುಖ್ಯಮಂತ್ರಿ ಘೋಷಿಸಿದರು.

ಇಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಕಾಪಾಡುವುದು ಪೊಲೀಸ್ ಇಲಾಖೆಯ ಪ್ರಮುಖ ಕರ್ತವ್ಯ. ಇಲಾಖೆಯಲ್ಲಿ ಶಿಸ್ತು, ದಕ್ಷತೆ, ನಿಷ್ಠೆ ಬಹಳ ಮುಖ್ಯ, ಈ ಎಲ್ಲಾ ಕಾರ್ಯಗಳಲ್ಲಿ ಕರ್ನಾಟಕ ಪೊಲೀಸ್ ದೇಶದಲ್ಲಿಯೇ ಉನ್ನತ ಸ್ಥಾನದಲ್ಲಿದೆ ಎಂದರು.

Join Whatsapp
Exit mobile version