ಪೆರಿಯಾರ್ ಪ್ರತಿಮೆಯನ್ನು ಧ್ವಂಸ ಮಾಡಿದ ಕೇಸರಿ ಗೂಂಡಾಗಳು

Prasthutha|

ತಿರುಚ್ಚಿ: ದಿವಂಗತ ಸಾಮಾಜಿಕ ಕಾರ್ಯಕರ್ತ ಪೆರಿಯಾರ್ ಇ.ವಿ.ರಾಮಸ್ವಾಮಿ ಪ್ರತಿಮೆಯನ್ನು ಧ್ವಂಸಗೊಳಿಸಿ, ಕೇಸರಿ ಬಣ್ಣ ಬಳಿದು, ಚಪ್ಪಲಿ ಹಾರ ಹಾಕಿ ಅವಮಾನಿಸಿರುವ ಘಟನೆ ತಿರುಚ್ಚಿ ಜಿಲ್ಲೆಯಲ್ಲಿ ನಡೆದಿದೆ.

ಇನಮ್ಕುಳತ್ತೂರ್  ಪ್ರದೇಶದ ಸಮತುವಾಪುರಂ ಕಾಲೋನಿಯಲ್ಲಿ ಈ ವಿಧ್ವಂಸಕ ಕೃತ್ಯ ಬೆಳಕಿಗೆ ಬಂದಿದ್ದು, ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಘಟನೆಯನ್ನು ಖಂಡಿಸಿದ್ದು, ಇತ್ತೀಚಿನ ತಿಂಗಳಲ್ಲಿ ತಮಿಳುನಾಡಿನಲ್ಲಿ ಇಂತಹ ಘಟನೆ ನಡೆದಿರುವುದು ಎರಡನೇ ಬಾರಿಯಾಗಿದೆ. ಈ ಹಿಂದೆ ಕೊಯಂಬತ್ತೂರಿನಲ್ಲಿ ಇಂತಹ ಘಟನೆ ನಡೆದಿತ್ತು.

ತಮಿಳುನಾಡು ಉಪಮುಖ್ಯಮಂತ್ರಿ ಬಿ.ಪನ್ನೀರ್ ಸೆಲ್ವಂ ಈ ವಿಧ್ವಂಸಕ ಕೃತ್ಯವನ್ನು ಖಂಡಿಸಿ, ಅಪರಾಧಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

- Advertisement -