ಗ್ಯಾನವಾಪಿ ಮಸೀದಿಯಲ್ಲಿ ಪೂಜೆ ಪ್ರಶ್ನಿಸಿದ್ದ ಅರ್ಜಿ ವಜಾ

Prasthutha|

ಪ್ರಯಾಗರಾಜ್: ವಾರಾಣಸಿಯ ಗ್ಯಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ವಿಗ್ರಹ ಪೂಜೆಗೆ ಹಿಂದೂಗಳಿಗೆ ಅವಕಾಶ ಕಲ್ಪಿಸಿದ್ದ ಆದೇಶ ಪ್ರಶ್ನಿಸಿ ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಮೇಲ್ಮನವಿಯನ್ನು ಅಲಹಾಬಾದ್ ಹೈಕೋರ್ಟ್ ವಜಾ ಮಾಡಿದೆ.

- Advertisement -


ಅರ್ಜಿ ವಜಾಗೊಳಿಸಿದ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್, ‘ಪ್ರಕರಣದ ಸಂಪೂರ್ಣ ದಾಖಲೆಗಳನ್ನು ಪರಿಶೀಲಿಸಿದ ಮತ್ತು ಸಂಬಂಧಪಟ್ಟವರ ವಾದಗಳನ್ನು ಪರಿಗಣಿಸಿದ ನಂತರ, ಜನವರಿ 17ರಂದು ಜಿಲ್ಲಾ ನ್ಯಾಯಾಧೀಶರು ನೀಡಿದ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ನ್ಯಾಯಾಲಯಕ್ಕೆ ಯಾವುದೇ ಕಾರಣ ಸಿಕ್ಕಿಲ್ಲ’ ಎಂದಿದ್ದಾರೆ.

ವ್ಯಾಸ್ ತೆಹ್ಖಾನಾ ಎಂಬ ಮಸೀದಿಯ ದಕ್ಷಿಣದ ನೆಲಮಾಳಿಗೆಯಲ್ಲಿ ಪೂಜೆ ಮುಂದುವರಿಯಲಿದೆ ಎಂದು ಹೈಕೋರ್ಟ್ ಹೇಳಿದೆ.



Join Whatsapp