ನವದೆಹಲಿ: ದೇಶದ ಎಲ್ಲಾ ನೋಂದಾಯಿತ ಮತ್ತು ಸರ್ಕಾರದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಏಕರೂಪದ ವಸ್ತ್ರ ಸಂಹಿತೆ ಜಾರಿಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
‘ಸಮಾನತೆ, ಭ್ರಾತೃತ್ವ ಹಾಗೂ ರಾಷ್ಟ್ರೀಯ ಏಕತೆಯನ್ನು ಸಾಧಿಸಲು ಏಕರೂಪ ವಸ್ತ್ರಸಂಹಿತೆ ಜಾರಿಗೊಳಿಸುವುದು ಅಗತ್ಯ’ ಎಂದು ವಕೀಲರಾದ ಅಶ್ವಿನಿ ಉಪಾಧ್ಯಾಯ ಹಾಗೂ ಅಶ್ವನಿ ದುಬೆ ಅವರ ಮೂಲಕ ಸಲ್ಲಿಸಿರುವ ಪಿಐಎಲ್‌ನಲ್ಲಿ ಪ್ರತಿಪಾದಿಸಲಾಗಿದೆ.
ಸೋಮವಾರ (ಫೆ.14) ಈ ಅರ್ಜಿ ವಿಚಾರಣೆ ನಡೆಯಲಿದೆ.